ಯಾವ ಸಮಯದಲ್ಲಾದರೂ ನನ್ನ ಹತ್ಯೆಯಾಗಬಹುದು: ಕೇರಳ ಲವ್ ಜಿಹಾದ್ ಸಂತ್ರಸ್ತೆ
ನಾನು ಯಾವ ಸಮಯದಲ್ಲಿ ಬೇಕಾದರೂ ಕೊಲ್ಲಲ್ಪಡಬಹುದು, ನಿಮ್ಮ ಸಹಾಯ ನನಗೆ ಬೇಕಿದೆ ಎಂದು ಕೇರಳ ಲವ್ ಜಿಹಾದ್ ಸಂತ್ರಸ್ತೆ ಯುವತಿ ಅಖಿಲಾ ....

Published On :
ತಿರುವನಂತಪುರ: ನಾನು ಯಾವ ಸಮಯದಲ್ಲಿ ಬೇಕಾದರೂ ಕೊಲ್ಲಲ್ಪಡಬಹುದು, ನಿಮ್ಮ ಸಹಾಯ ನನಗೆ ಬೇಕಿದೆ ಎಂದು ಕೇರಳ ಲವ್ ಜಿಹಾದ್ ಸಂತ್ರಸ್ತೆ ಯುವತಿ ಅಖಿಲಾ ಅಶೋಕನ್ ಅಥವಾ ಹಾದಿಯಾ ಮನವಿ ಮಾಡಿದ್ದಾಳೆ.
ವಿಡಿಯೋ ಮೂಲಕ ಆಗಸ್ಟ್ 17ರಂದು ಈ ರೀತಿ ಮನವಿ ಮಾಡಿಕೊಂಡಾಗ ಹೋರಾಟಗಾರ ರಾಹುಲ್ ಈಶ್ವರ್ ವಿಡಿಯೋ ಮಾಡಿದ್ದು, ಗುರುವಾರ ಬಹಿರಂಗವಾಗಿದೆ.
ನಾನು ನಾಳೆ ಅಥವಾ ನಾಳಿದ್ದು ಹೀಗೆ ಯಾವುದೇ ಸಮಯದಲ್ಲಿ ಇಲ್ಲಿ ಕೊಲೆಯಾಗಬಹುದು ಅನ್ನೋ ನಂಬಿಕೆ ನನ್ನಲ್ಲಿದೆ. ನನಗೆ ಗೊತ್ತು ತಂದೆಗೆ ನನ್ನ ಮೇಲೆ ವಿಪರೀತ ಸಿಟ್ಟಿದೆ. ನಾನು ನಡೆದುಕೊಂಡು ಹೋಗುವಾಗ ಅವರು ಹೊಡೆಯುತ್ತಾರೆ. ಹಾಗೆಯೇ ಒದೆಯುತ್ತಾರೆ. ಇದರಿಂದ ತಲೆ ಅಥವಾ ನನ್ನ ದೇಹದ ಯಾವುದೇ ಭಾಗಕ್ಕಾಗಾದ್ರೂ ಗಂಭೀರ ಗಾಯಗಳಾಗಿ ಸಾಯುತ್ತೇನೆ. ಹೀಗಾಗಿ ನನ್ನನ್ನು ಇಲ್ಲಿಂದ ಹೊರಗಡೆ ಕರೆದುಕೊಂಡು ಹೋಗಿ ಅಂತ ವಿಡಿಯೋದಲ್ಲಿ ಆಕೆ ಮನವಿ ಮಾಡಿದ್ದಾಳೆ.
25 ವರ್ಷದ ಹೋಮಿಯೋಪತಿ ವೈದ್ಯೆ ಅಖಿಲ ಇಸ್ಲಾಂಗೆ ಮತಾಂತರಗೊಂಡು ಹೆಸರನ್ನು ಹಾದಿಯಾ ಎಂದು ಬದಲಾಯಿಸಿಕೊಂಡು ಮುಸ್ಲಿಂ ಯುವಕ ಶಫಿನ್ ಜಹಾನ್ ಎಂಬಾತನ ಜತೆ 2016ರಲ್ಲಿ ವಿವಾಹವಾಗಿದ್ದಳು. ಕೇರಳದ ಮಲಪ್ಪುರಂ ಜಿಲ್ಲೆಯಿಂದ ಹಾದಿಯಾಳನ್ನು ಅಪಹರಿಸಿ, ಆಕೆಯ ಗೆಳೆಯರು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಅಂತ ಹಾದಿಯಾ ತಂದೆ ಆರೋಪಿಸಿದ್ದರು.
ಈ ಕುರಿತು ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಇದೊಂದು ಲವ್ ಜಿಹಾದ್ ಎಂದು ಬಣ್ಣಿಸಿ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಕೇರಳ ಪೊಲೀಸರಿಗೆ ಆದೇಶ ನೀಡಿತ್ತು.
ಅಲ್ಲದೇ ಯುವಕ ಶಫಿನ್ ಜಾಹನ್ ಗೆ ಉಗ್ರರೊಂದಿಗೆ ಸಂಪರ್ಕವಿರುವುದನ್ನು ಕೋರ್ಟ್ ಒಪ್ಪಿಕೊಂಡಿತ್ತು. ಕೇರಳದ ಹಿಂದೂ ಯುವತಿಯೊಬ್ಬಳು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮುಸ್ಲಿಂ ಯುವಕನ ಜತೆ ವಿವಾಹವಾದ ಪ್ರಕರಣದ ಬಗ್ಗೆ ಎನ್‍ಐಎ ತನಿಖೆ ನಡೆಸಬೇಕೆಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಪ್ರಕರಣದ ವಿಚಾರವನ್ನು ಈ ವರ್ಷದ ಆರಂಭದಲ್ಲಿ ಕೈಗೆತ್ತಿಕೊಂಡ ಹೈ ಕೋರ್ಟ್ ವಯಸ್ಕರ ಒಪ್ಪಿಗೆ ಇಲ್ಲದೇ ಈ ಮದುವೆ ನಡೆಯಲು ಹೇಗೆ ಸಾಧ್ಯ ಅಂತ ಪ್ರಶ್ನಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


