ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನು ದೂರ ಹೋದಷ್ಟು ಮಾತ್ರ ಟೋಲ್ ಶುಲ್ಕ!
ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕ ಪಾವತಿ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ತರಲು ನಿರ್ಧರಿಸಿದ್ದು, ಇನ್ನು ಮುಂದೆ ವಾಹನ ಸವಾರರು ತಾವು ಸಾಗುವ ದೂರಕ್ಕೆ ಮಾತ್ರ ಟೋಲ್ ಶುಲ್ಕ ಪಾವತಿ ಮಾಡಿದರೆ ಸಾಕು..

Published On :
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕ ಪಾವತಿ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ತರಲು ನಿರ್ಧರಿಸಿದ್ದು, ಇನ್ನು ಮುಂದೆ ವಾಹನ ಸವಾರರು ತಾವು ಸಾಗುವ ದೂರಕ್ಕೆ ಮಾತ್ರ ಟೋಲ್ ಶುಲ್ಕ ಪಾವತಿ ಮಾಡಿದರೆ ಸಾಕು..
ಹೌದು..ಇಂತಹುದೊಂದು ಟೋಲ್ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವ ವಾಹನಗಳು ತಾವು ಸಾಗಿದ ದೂರಕ್ಕೆ ಮಾತ್ರ ಶುಲ್ಕ ಪಾವತಿಸುವಂಥ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಸಾರಿಗೆ ಇಲಾಖೆಯ ಕಾರ್ಯದರ್ಶಿ ಯುದ್ ವೀರ್ ಸಿಂಗ್ ಮಲಿಕ್ ಅವರು ಶುಕ್ರವಾರ ಮಾಹಿತಿ ನೀಡಿದ್ದು, ಟೋಲ್ ವ್ಯವಸ್ಥೆಯಲ್ಲೇ ವಿನೂತನ ಹೆಜ್ಜೆಯೆಂದು ಹೇಳಲಾಗುವ "ಇಂಟಲಿಜೆನ್ಸ್ ಟ್ರಾನ್ಸ್‌ಪೊàರ್ಟ್ ಮ್ಯಾನೇಜ್‌ಮೆಂಟ್' ಎಂಬ ಹೊಸ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ರೂಪಿಸುತ್ತಿದ್ದು, ಮುಂದಿನ ವರ್ಷ ಈ ವ್ಯವಸ್ಥೆ ಜಾರಿಗೆ ಬರಲಿದೆ.
ಈಗ ಸದ್ಯಕ್ಕೆ ಚಾಲ್ತಿಯಲ್ಲಿರುವ ಟೋಲ್ ಪದ್ಧತಿಯನ್ನು ಮುಂದಿನ ವರ್ಷದಿಂದ ಕೈಬಿಡಲು ನಿರ್ಧರಿಸಲಾಗಿದ್ದು, ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಅದರಂತೆ, ಹೆದ್ದಾರಿಗಳಲ್ಲಿ ಸಾಗುವ ಪ್ರತಿಯೊಂದು ವಾಹನ, ತಾನು ಚಲಿಸಿದ ದೂರಕ್ಕಷ್ಟೇ ಶುಲ್ಕ ಕಟ್ಟುವ ಅನುಕೂಲ ಕಲ್ಪಿಸಲಾಗುತ್ತದೆ. ಇದು, ವಾಹನ ಸವಾರರಿಗೆ ಅನಗತ್ಯವಾಗಿ ತಮ್ಮ ಬಳಕೆಗೂ ಮೀರಿ ಹೆಚ್ಚು ಟೋಲ್ ಕಟ್ಟುವಂಥಹ ಹೊರೆಯನ್ನು ತಪ್ಪಿಸುತ್ತದೆಸ ಎಂದು ಮಲಿಕ್ ಹೇಳಿದರು.
ಅಂತೆಯೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವ ವಾಹನವು ಚಲಿಸಿದ ದೂರ ಹಾಗೂ ಅದಕ್ಕೆ ಅನುಗುಣವಾದ ಶುಲ್ಕವನ್ನು ನಿಗದಿಗೊಳಿಸಲೆಂದೇ 'ಡಿಸ್ಟೆನ್ಸ್ ಬೇಸ್ಡ್ ಎಲೆಕ್ಟ್ರಾನಿಕ್ ಟೋಲಿಂಗ್' ಎಂಬ ವಿನೂತನ ತಂತ್ರಜ್ಞಾನವನ್ನು ಅಳವಡಿಸಲಾಗುವುದು. ಈಗಾಗಲೇ, ಈ ತಂತ್ರಜ್ಞಾನ ಅಮೆರಿಕ, ಆಸ್ಟ್ರೇಲಿಯಾದಂಥಹ ರಾಷ್ಟ್ರಗಳಲ್ಲಿ ಚಾಲ್ತಿಯಲ್ಲಿವೆ. ಈ ನೂತನ ವ್ಯವಸ್ಥೆ ಮೂಲಕ ವಾಹನ ಸವಾರರಿಗೆ ಶುಲ್ಕದ ಹೊರೆ ಖಂಡಿತವಾಗಿಯೂ ಇಳಿಕೆಯಾಗುತ್ತದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew Delhiಕೇಂದ್ರ ಸರ್ಕಾರunion GovernmentTransport MinistryToll in national highwayಸಾರಿಗೆ ಸಚಿವಾಲಯರಾಷ್ಟ್ರೀಯ ಹೆದ್ದಾರಿ ಟೋಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


