ಭಾರತದಲ್ಲಿ ಯಾವುದೇ ರಾಜಕೀಯ ಪಕ್ಷವನ್ನು ಅಳಿಸಿಹಾಕಲು ಸಾಧ್ಯವಿಲ್ಲ: ಪ್ರಣಬ್ ಮುಖರ್ಜಿ

Published On :
ಬಹುಪಕ್ಷೀಯ ವ್ಯವಸ್ಥೆ ಇರುವ ಭಾರತದಲ್ಲಿ ಯಾವುದೇ ರಾಜಕೀಯ ಪಕ್ಷಗಳನ್ನು ಅಳಿಸಿಹಾಕುವುದಕ್ಕೆ ಸಾಧ್ಯವಿಲ್ಲ ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಸಿಎನ್ಎನ್-ನ್ಯೂಸ್ 18 ಸುದ್ದಿ ವಾಹಿನಿಗೆ ಸಂದರ್ಶನ ನೀಡಿರುವ ಪ್ರಣಬ್ ಮುಖರ್ಜಿ, ರಾಜಕೀಯ ಪಕ್ಷಗಳಿಗೆ ಏರಿಳಿತ ಸಹಜವಾದದ್ದು ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಅಳಿವಿನತ್ತ ಸಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಭಾರತ ಬಹುಕ್ಷೀಯ ರಾಜಕೀಯ ವ್ಯವಸ್ಥೆಯನ್ನು ಹೊಂದಿದೆ. ಯಾವುದೇ ರಾಜಕೀಯ ಪಕ್ಷವನ್ನು ಅಳಿಸಿಹಾಕುವುದಕ್ಕೆ ಸಾಧ್ಯವಿಲ್ಲ ಎಂಬುದು ನನ್ನ ನಂಬಿಕೆ ಎಂದು ಪ್ರಣಬ್ ಮುಖರ್ಜಿ ಹೇಳಿದ್ದಾರೆ.
ಯಾವುದೇ ರಾಜಕೀಯ ಪಕ್ಷಗಳಿಗೆ ಏರಿಳಿತಗಳು ಸಹಜವಾದುದ್ದಾಗಿರುತ್ತದೆ, ಇಳಿತ ಎಂದರೆ ಸಂಪೂರ್ಣವಾಗಿ ನೆಲಕಚ್ಚುವುದಲ್ಲ ಎಂದು ಪ್ರಣಬ್ ಮುಖರ್ಜಿ ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


