ಉತ್ತರ ಪ್ರದೇಶ: ಕುಡಿದ ಮತ್ತಿನಲ್ಲಿ 100 ವರ್ಷದ ಮಹಿಳೆ ಮೇಲೆ ಅತ್ಯಾಚಾರ, ಶತಾಯುಷಿ ಸಾವು
ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಯುವಕೊಬ್ಬ ಕುಡಿತ ಮತ್ತಿನಲ್ಲಿ 100 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು,

Published On :
ಲಖನೌ: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಯುವಕೊಬ್ಬ ಕುಡಿದ ಮತ್ತಿನಲ್ಲಿ 100 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಅಸ್ವಸ್ಥಗೊಂಡ ಶತಾಯುಷಿ ಮೃತಪಟ್ಟಿದ್ದಾರೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ಮೀರತ್ ಜಿಲ್ಲೆಯ ಜಾನಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಈ ಆಘಾತರಕಾರಿ ಘಟನೆ ನಡೆದಿದ್ದು, ಸಂತ್ರಸ್ಥ ಮಹಿಳೆ ತನ್ನ ಸಹೋದರನೊಂದಿಗೆ ವಾಸಿಸುತ್ತಿದ್ದಳು ಎನ್ನಲಾಗಿದೆ.
ಶತಾಯುಷಿ ಮೇಲೆ ಅತ್ಯಾಚಾರ ಎಸಗಿದ ಯುವಕ ಅಂಕಿತ ಪುನಿಯಾ ಎಂದು ಗುರುತಿಸಲಾಗಿದ್ದು, ಅಸಹಾಯಕ ಮಹಿಳೆ ಎರಗಿ ಮೃಗದಂತೆ ವರ್ತಿಸಿದ್ದಾನೆ. ಮಹಿಳೆ ಜೋರಾಗಿ ಅಳುತ್ತಿರುವುದನ್ನು ಕೇಳಿಸಿಕೊಂಡ ಆಕೆಯ ಸಹೋದರ ನೆರೆಯವರ ಸಹಾಯದೊಂದಿಗೆ ಕಾಮುಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆ ನಂಬಂಧ ಯುವಕನ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದು, ಆರೋಪಿ ಈ ಹಿಂದೆ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


