ದೇಶ

10 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ ಇಟಲಿ ಪ್ರಧಾನಿ!

ಬರೊಬ್ಬರಿ 10 ವರ್ಷಗಳ ಬಳಿಕ ಇಟಲಿ ದೇಶದ ಪ್ರಧಾನಿ ಭಾರತಕ್ಕೆ ಭೇಟಿ ನೀಡಿದ್ದು, ಇಟಲಿ ಪ್ರಧಾನಿ ಪಾವೋಲೋ ಪಾವೊಲೊ ಗೆಂಟಿಲೋನಿ ಅವರು ದೆಹಲಿಗೆ ಆಗಮಿಸಿದ್ದಾರೆ.

10 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿದ ಇಟಲಿ ಪ್ರಧಾನಿ!
ಪ್ರಧಾನಿ ಮೋದಿ ಹಾಗೂ ಇಟಲಿ ಪ್ರಧಾನಿ ಪಾವೊಲೊ ಗೆಂಟಿಲೋನಿ
Published On :
ನವದೆಹಲಿ: ಬರೊಬ್ಬರಿ 10 ವರ್ಷಗಳ ಬಳಿಕ ಇಟಲಿ ದೇಶದ ಪ್ರಧಾನಿ ಭಾರತಕ್ಕೆ ಭೇಟಿ ನೀಡಿದ್ದು, ಇಟಲಿ ಪ್ರಧಾನಿ ಪಾವೋಲೋ ಪಾವೊಲೊ ಗೆಂಟಿಲೋನಿ ಅವರು ದೆಹಲಿಗೆ ಆಗಮಿಸಿದ್ದಾರೆ.
2012ರಲ್ಲಿ ಕೇರಳದಲ್ಲಿ ಇಟಲಿ ನಾವಿಕರು ಮೀನುಗಾರರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದ ಬಳಿಕ ಭಾರತ ಮತ್ತು ಇಟಲಿ ದೇಶಗಳ ನಡುವಿನ ಸಂಬಂಧ ಹಳಸಿತ್ತು. ಆ ಪ್ರಕರಣದ ಬಳಿಕ ಇದೇ ಮೊದಲ ಬಾರಿಗೆ ಇಟಲಿ ಪ್ರಧಾನಿ  ಪಾವೊಲೊ ಗೆಂಟಿಲೋನಿ ಭಾನುವಾರ ದೆಹಲಿಗೆ ಆಗಮಿಸಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. 2 ದಿನಗಳ ಪ್ರವಾಸದ ನಿಮಿತ್ತ ಭಾರತಕ್ಕೆ ಆಗಮಿಸಿರುವ ಪಾವೊಲೊ ಗೆಂಟಿಲೋನಿ ಅವರು ಇಂದು  ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಇಂದು ತಮ್ಮ ದೇಶದ ವಿವಿಧ ಪ್ರತಿನಿಧಿಗಳೊಂದಿಗೆ ನರೇಂದ್ರ ಮೋದಿ ಅವರನ್ನು ಇಟಲಿ ಪ್ರಧಾನಿ ಭೇಟಿ ಮಾಡಲಿದ್ದು, ಸುಮಾರು 90 ನಿಮಿಷಗಳ ಕಾಲ ಚರ್ಚೆ ನಡೆಸಲಿದ್ದಾರೆ. 
ಈ ಬಗ್ಗೆ ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇಟಲಿ ಪ್ರಧಾನಿಗಳ ಭಾರತ ಭೇಟಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಗಟ್ಟಿಗೊಳಿಸಲಿದೆ. ಅಂತೆಯೇ  ಭೇಟಿ ವೇಳೆ ಹಲವು ಒಪ್ಪಂದಗಳ ಕುರಿತು ಚರ್ಚೆ ನಡೆಯಲಿದ್ದು, ಈ ಭೇಟಿಯಿಂದಾಗಿ ಭಾರತ-ಇಟಲಿ ನಡುವಿನ ಆರ್ಥಿಕ ಸಂಬಂಧ ಸುಧಾರಣೆಯಾಗಲಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಭೇಟಿ ಬಳಿಕ ಇಟಲಿ ಪ್ರಧಾನಿ ಪಾವೊಲೊ ಗೆಂಟಿಲೋನಿ ಅವರು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ, ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ  ಚರ್ಚಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.