ರಾಜಸ್ಥಾನ ರಾಜ್ಯಸಭೆ ಚುನಾವಣೆ: ಕೇಂದ್ರ ಸಚಿವ ಅಲ್ಫೋನ್ಸ್ ಬಿಜೆಪಿ ಅಭ್ಯರ್ಥಿ!
ರಾಜಸ್ಥಾನ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಪ್ರವಾಸೋಧ್ಯಮ ಸಚಿವ ಕೆಜೆ ಅಲ್ಫೋನ್ಸ್ ಅವರು ಆಯ್ಕೆಯಾಗಿದ್ದಾರೆ.

Published On :
ನವದೆಹಲಿ: ರಾಜಸ್ಥಾನ ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಪ್ರವಾಸೋಧ್ಯಮ ಸಚಿವ ಕೆಜೆ ಅಲ್ಫೋನ್ಸ್ ಅವರು ಆಯ್ಕೆಯಾಗಿದ್ದಾರೆ.
ಭಾನುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದ್ದು, ಕೇಂದ್ರ ಸಚಿವ ಕೆಜೆ ಅಲ್ಫೋನ್ಸ್ ಅವರನ್ನು ರಾಜಸ್ಥಾನ ರಾಜ್ಯಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದೆ.
ಇನ್ನು ಈ ಹಿಂದೆ ರಾಜಸ್ಥಾನದಿಂದ ರಾಜ್ಯಸಭೆ ಆರಿಸಿ ಬಂದಿದ್ದ ಎಂ ವೆಂಕಯ್ಯನಾಯ್ಡು ಅವರು ಉಪ ರಾಷ್ಟ್ಪಪತಿಯಾಗಿ ಆಯ್ಕೆಯಾದ ಬಳಿಕ ಈ ಸ್ಥಾನ ತೆರವಾಗಿತ್ತು. ಹೀಗಾಗಿ ಇದೀಗ ಈ ಸ್ಥಾನಕ್ಕೆ ಕೆಜೆ ಅಲ್ಫೋನ್ಸ್ ಅವರನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 30ರಂದು ರಾಜ್ಯಸಭೆ ಉಪ ಚನಾವಣೆಯ ಪ್ರಕಟಣೆ ಹೊರ ಬೀಳಲಿದ್ದು, ನಾಮಪತ್ರ ಸಲ್ಲಿಕೆ ಮಾಡಲು ನವೆಂಬರ್ 6 ಕೊನೆಯ ದಿನಾಂಕವಾಗಿದೆ.
ಅಲ್ಫೋನ್ಸ್ ಜಯ ಖಚಿತ
ಇನ್ನು ಒಟ್ಟು 200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಅತೀ ದೊಡ್ಡ ಪಕ್ಷವಾಗಿರುವ ಬಿಜೆಪಿ ಒಟ್ಟು 160 ಶಾಸಕರನ್ನು ಹೊಂದಿದೆ. ಪ್ರತಿಪಕ್ಷ ಕಾಂಗ್ರೆಸ್ ಕೇವಲ 24 ಶಾಸಕರ ಬಲ ಹೊಂದಿದೆ. ಹೀಗಾಗಿ ಅಲ್ಫೋನ್ಸ್ ಅವರ ಗೆಲುವು ಖಚಿತ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhibjpಬಿಜೆಪಿRajasthanರಾಜಸ್ಥಾನRajya Sabha By pollUnion Minister KJ Alphonsರಾಜ್ಯಸಭೆ ಉಪ ಚುನಾವಣೆಕೇಂದ್ರ ಸಚಿವ ಕೆಜೆ ಅಲ್ಫೋನ್ಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


