ದೇಶ

ಬಿಜೆಪಿ ನಮಗೆ ಪ್ರಧಾನ ವಿರೋಧಿಗಳು: ಶಿವಸೇನೆ- ರಾಹುಲ್ ಗಾಂಧಿ ಬಗ್ಗೆ ಮೆಚ್ಚುಗೆ

ಬಿಜೆಪಿ-ಶಿವಸೇನೆ ಮೈತ್ರಿಕೂಟದ ಮಹಾರಾಷ್ಟ್ರ ಸರ್ಕಾರ ಮೂರು ವರ್ಷ ಪೂರೈಸಿದ್ದು, ಶಿವಸೇನೆ ಬಿಜೆಪಿಯನ್ನು ಪ್ರಧಾನ ವಿರೋಧಿಗಳು ಎಂದು ಹೇಳಿದ್ದು, ರಾಹುಲ್ ಗಾಂಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ.

ಬಿಜೆಪಿ ನಮಗೆ ಪ್ರಧಾನ ವಿರೋಧಿಗಳು: ಶಿವಸೇನೆ- ರಾಹುಲ್ ಗಾಂಧಿ ಬಗ್ಗೆ ಮೆಚ್ಚುಗೆ
ಸಂಜಯ್ ರಾವುತ್
Published On :
ಮುಂಬೈ: ಬಿಜೆಪಿ-ಶಿವಸೇನೆ ಮೈತ್ರಿಕೂಟದ ಮಹಾರಾಷ್ಟ್ರ ಸರ್ಕಾರ ಮೂರು ವರ್ಷ ಪೂರೈಸಿದ್ದು, ಶಿವಸೇನೆ ಬಿಜೆಪಿಯನ್ನು ಪ್ರಧಾನ ವಿರೋಧಿಗಳು ಎಂದು ಹೇಳಿದ್ದು, ರಾಹುಲ್ ಗಾಂಧಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. 
ಸರ್ಕಾರದ ಬಗ್ಗೆ ಮಾತನಾಡಿರುವ ಶಿವಸೇನೆ ನಾಯಕ ಸಂಜಯ್ ರಾವುತ್, ರಾಹುಲ್ ಗಾಂಧಿಯವರಲ್ಲಿ ಕಳೆದ ಮೂರು ವರ್ಷಗಳಿಂದ ಬದಲಾವಣೆ ಕಂಡುಬರುತ್ತಿದೆ. ನಾಯಕ ಎಂದರೆ ಜನರು ಒಪ್ಪಿಕೊಳ್ಳುವಂತಿರಬೇಕು, 2014 ರಿಂದ ರಾಹುಲ್ ಗಾಂಧಿ ಅವರಲ್ಲಿ ಬದಲಾವಣೆ ಕಂಡುಬರುತ್ತಿದ್ದು, ಜನರು ಈಗ ರಾಹುಲ್ ಗಾಂಧಿ ಅವರ ಮಾತುಗಳನ್ನು ಕೇಳಲು ಬಯಸುತ್ತಾರೆ ಎಂದು ಹೇಳಿದ್ದಾರೆ. 
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ನಡೆಸುತ್ತಿದೆ, ಆದ್ದರಿಂದ ನಾವೂ ಅದರಲ್ಲಿದ್ದೇವೆ, ಆದರೆ ಬಿಜೆಪಿ ವಿರೋಧಪಕ್ಷಗಳಾದ ಕಾಂಗ್ರೆಸ್ ಹಾಗೂ ಎನ್ ಸಿಪಿಯನ್ನು ಟೀಕಿಸುವ ಬದಲು ಶಿವಸೇನೆಯನ್ನು ಟಾರ್ಗೆಟ್ ಮಾಡುತ್ತದೆ. ಆದ್ದರಿಂದ ಬಿಜೆಪಿ ನಮಗೂ ಸಹ ಪ್ರಧಾನ ವಿರೋಧಿಗಳೇ ಎಂದು ರಾವುತ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.