ಸರ್ದಾರ್ ಪಟೇಲರ ಕೊಡುಗೆಯನ್ನು ಕಾಂಗ್ರೆಸ್ ಎಂದಿಗೂ ತಿರಸ್ಕರಿಸಿರಲಿಲ್ಲ: ಶೀಲಾ ದೀಕ್ಷಿತ್
ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್'ರ ಕೊಡುಗೆಗಳನ್ನು ಕಾಂಗ್ರೆಸ್ ಎಂದಿಗೂ ತಿರಸ್ಕರಿಸಿರಲಿಲ್ಲ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಮಂಗಳವಾರ ಹೇಳಿದ್ದಾರೆ...

Published On :
ನವದೆಹಲಿ: ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್'ರ ಕೊಡುಗೆಗಳನ್ನು ಕಾಂಗ್ರೆಸ್ ಎಂದಿಗೂ ತಿರಸ್ಕರಿಸಿರಲಿಲ್ಲ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಮಂಗಳವಾರ ಹೇಳಿದ್ದಾರೆ.
ಸರ್ದಾರ್ ಪಟೇಲ್ ಜನ್ಮದಿನ ನಿಮಿತ್ತ 'ರನ್ ಫಾರ್ ಯೂನಿಟಿ'ಗೆ ಚಾಲನೆ ನೀಡಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಹಿಂದೆ ಇದ್ದ ಸರ್ಕಾರಗಳು ಉಕ್ಕಿನ ಮನುಷ್ಯ ಸರ್ದಾರ್ ಪಟೇಲರ ಪರಂಪರೆಯನ್ನು ನಿರ್ಲಕ್ಷಿಸಿದ್ದವು ಎಂದು ಹೇಳಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶೀಲಾ ದೀಕ್ಷಿತ್ ಅವರು, ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್'ರ ಕೊಡುಗೆಗಳನ್ನು ಕಾಂಗ್ರೆಸ್ ಎಂದಿಗೂ ತಿರಸ್ಕರಿಸಿರಲಿಲ್ಲ. ಇತಿಹಾಸ ತಿಳಿದವರು ಹಾಗೂ ಓದಿರುವವರು ಪ್ರಧಾನಿ ಮೋದಿಯವರ ಹೇಳಿಕೆಯನ್ನು ಯಾರೂ ನಂಬುವುದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಎಂದಿಗೂ ಪಟೇಲರ ಪರಂಪರೆಯನ್ನು ತಿರಸ್ಕರಿಸರಲಿಲ್ಲ. ಪ್ರಧಾನಿ ಮೋದಿಯವರ ಹೇಳಿಕೆ ತಪ್ಪು. ದೇಶದ ಸ್ವಾತಂತ್ರ್ಯಕ್ಕೆ ಸರ್ದಾರ್ ಪಟೇಲರು ಹಾಗೂ ನೆಹರೂ ಇಬ್ಬರೂ ಕಾರಣಕರ್ತರಾಗಿದ್ದಾರೆ. ಇತಿಹಾಸ ಓದಿರುವವರಾಗರೂ ಮೋದಿಯವರ ಹೇಳಿಕೆಯನ್ನು ನಂಬುವುದಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


