ಅಪ್ರಾಪ್ತೆ ಮೇಲೆ ಅತ್ಯಾಚಾರ: ಸಮಾಜಕ್ಕೆ ಹೆದರಿದ ಪೋಷಕರು, ಚಿಕಿತ್ಸೆ ದೊರಕದೆ ಬಾಲಕಿ ಸಾವು
16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಸರಿಯಾದ ವೇಳೆಗೆ ಚಿಕಿತ್ಸೆ ಸಿಗದ ಕಾರಣ 4 ದಿನಗಳ ನಂತರ ಆಕೆ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಫಜೀಲ್ಕಾ ...

Published On :
ಚಂಡಿಗಡ: 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಸರಿಯಾದ ವೇಳೆಗೆ ಚಿಕಿತ್ಸೆ ಸಿಗದ ಕಾರಣ 4 ದಿನಗಳ ನಂತರ ಆಕೆ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಫಜೀಲ್ಕಾ ಜಿಲ್ಲೆಯ ಜಲಾಲಾಬಾದ್ ನಲ್ಲಿ ನಡೆದಿದೆ.
ಈ ಮೊದಲು ಬಾಲಕಿ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ, ಸಮಾಜಕ್ಕೆ ಹೆದರಿ ಅವರು ಪ್ರಕರಣವನ್ನು ಗುಟ್ಟಾಗಿಟ್ಟಿದ್ದರು. ಜೊತೆಗೆ ಎಲ್ಲರಿಗೂ ವಿಷಯ ತಿಳಿಯುತ್ತದೆ ಎಂಬ ಭಯದಿಂದ ಆಸ್ಪತ್ರೆಗೂ ದಾಖಲಿಸಿರಲಿಲ್ಲ, ಭಾನುವಾರ ನಮಗೆ ಮಾಹಿತಿ ತಿಳಿದ ಮೇಲೆ ಕೇಸು ದಾಖಲಿಸಿರುವುದಾಗಿ ಎಸ್ ಪಿ ತಿಳಿಸಿದ್ದಾರೆ.
ಆಕೆಯ ಮೇಲೆ ದೈಹಿಕ ಹಿಂಸಾಚಾರ ನಡೆದ ನಂತರ ಮೂರು ದಿನಗಳ ಕಾಲ ಪ್ರಜ್ಞಾಹೀನಳಾಗಿದ್ದಳು, ಜಲಾಲಾಬಾದ್ ನ 9ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಆಕೆ ಶಾಲೆ ಮುಗಿಸಿ ಮನೆಗೆ ತೆರಳುವಾಗ ಅಕ್ಟೋಬರ್ 25ನೇ ತಾರೀಖಿನಂದು ಬೈಕ್ ನಲ್ಲಿ ಬಂದ ವ್ಯಕ್ತಿಗಳು ಆಕೆಯನ್ನು ಅಪಹರಿಸಿದ್ದರು.
ಶಾಲೆಯ ಪಕ್ಕದ ಮೈದಾನಕ್ಕೆ ಎಳೆದೊಯ್ದು ಆಕೆಯ ಮೇಲೆ ಅತ್ಯಾಚಾರ ನಡೆಸಿ ಅಲ್ಲಿಂದ ಪರಾರಿಯಾಗಿದ್ದರು. ಬಾಲಕಿ ಮನೆಗೆ ಬಾರದಿದ್ದಾಗ ಗಾಬರಿಗೊಂಡ ಪೋಷಕರು ಆಕೆಗಾಗಿ ಹುಡುಕಾಟ ನಡೆಸಿದ್ದಾರೆ, ಮೈದಾನದಲ್ಲಿ ಆಕೆ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದನ್ನು ಕಂಡು ಪೋಶಕರು ಮನೆಗೆ ಕರೆದೊಯ್ದಿದ್ದಾರೆ.
ಅತ್ಯಾಚಾರ ನಡೆಸಿದವರಲ್ಲಿ ಒಬ್ಬ ಆರೋಪಿ ತನ್ನ ಮಗಳ ಸಹಪಾಠಿ ಎಂದು ಬಾಲಕಿಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಬಾಲಕಿ ತಂದೆಯ ದೂರಿನ ಆಧಾರದ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


