ಸಿಸಿಟಿವಿ ಕ್ಯಾಮೆರಾ ಅಳವಡಿಸಿ: ಕಾಶ್ಮೀರ ಜನತೆಗೆ ಪೊಲೀಸರ ಮನವಿ
ಮನೆಗಳು, ಕಾಲೋನಿಗಳು ಹಾಗೂ ಅಂಗಡಿ ಮುಂಗಟ್ಟುಗಳ ಮುಂದೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುವಂತೆ ಕಾಶ್ಮೀರ ಜನತೆಗೆ ಪೊಲೀಸರು ಬುಧವಾರ ಮನವಿ ಮಾಡಿಕೊಂಡಿದ್ದಾರೆ...

Published On :
ಜಮ್ಮು: ಮನೆಗಳು, ಕಾಲೋನಿಗಳು ಹಾಗೂ ಅಂಗಡಿ ಮುಂಗಟ್ಟುಗಳ ಮುಂದೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುವಂತೆ ಕಾಶ್ಮೀರ ಜನತೆಗೆ ಪೊಲೀಸರು ಬುಧವಾರ ಮನವಿ ಮಾಡಿಕೊಂಡಿದ್ದಾರೆ.
ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಉದ್ದೇಶದಿಂದ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸ್ಥಳೀಯ ಜನತೆಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.
ಅಪರಾಧ ಕೃತ್ಯಗಳನ್ನು ತಡೆಗಟ್ಟುವ ಉದ್ದೇಶದಿಂದ ಹಾಗೂ ಆರೋಪಿಗಳನ್ನು ಗುರುತು ಹಿಡಿಯುವ ಸಲುವಾಗಿ ಮನೆಗಳು ಹಾಗೂ ಅಂಗಡಿ ಮುಗ್ಗಟ್ಟುಗಳ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅವಳಪಡಿಸುವಂತೆ ಸೂಚಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಅಧಿಕಾರಿ ಸಂದೀಪ್ ಚೌಧರಿಯವರು ಹೇಳಿದ್ದಾರೆ.
ಕಳ್ಳತನ ಹಾಗೂ ದರೋಡೆ ಪ್ರಕರಣಗಳ ತನಿಖೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಪ್ರಮುಖ ಪಾತ್ರವನ್ನು ನಿಭಾಯಿಸುತ್ತವೆ. ರಜೆ ನಿಮಿತ್ತ ಜನರು ಮನೆಯಿಂದ ಹೊರಹೋದಂತಹ ಸಂದರ್ಭಗಳಲ್ಲಿ ಕಳ್ಳತನವಾಗುವ ಸಂದರ್ಭಗಳು ಹೆಚ್ಚು. ಜನರು ಮನೆಗಳಲ್ಲಿ ದುಡ್ಡು ಹಾಗೂ ಆಭರಣಗಳನ್ನು ಇಡುವ ಬದಲು ಬ್ಯಾಂಕ್ ಲಾಕರ್ ಗಳಲ್ಲಿ ಇಡಬೇಕು. ಪ್ರಮುಖವಾಗಿ ಮದುವೆ ಸಮಾರಂಭಗಳ ಸಂದರ್ಭದಲ್ಲಿ. ಕಳ್ಳತನವಾದಂತಹ ಸಂದರ್ಭದಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


