ದೇಶ

ಪೊಲೀಸ್ ವಾಹನದ ಮೇಲೆ ಉಗ್ರರ ದಾಳಿ; ಓರ್ವ ಉಗ್ರನನ್ನು ಸದೆ ಬಡಿದ ಭದ್ರತಾ ಪಡೆಗಳು!

ಕಣಿವೆ ರಾಜ್ಯ ಜಮ್ಮು ಮತ್ತ ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಭದ್ರತಾ ಪಡೆಗಳ ವಾಹನಗಳ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಲೀಸ್ ವಾಹನದ ಮೇಲೆ ಉಗ್ರರ ದಾಳಿ; ಓರ್ವ ಉಗ್ರನನ್ನು ಸದೆ ಬಡಿದ ಭದ್ರತಾ ಪಡೆಗಳು!
ಭದ್ರತಾ ಪಡೆಗಳ ಮೇಲೆ ಉಗ್ರ ದಾಳಿ
Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತ ಕಾಶ್ಮೀರದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ಭದ್ರತಾ ಪಡೆಗಳ ವಾಹನಗಳ ಮೇಲೆ ದಾಳಿ ನಡೆಸಿದ ಪರಿಣಾಮ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಮ್ಮ ಮತ್ತು ಕಾಶ್ಮೀರ ಶ್ರೀನಗರ ಮತ್ತು ಜಮ್ಮು ಹೆದ್ದಾರಿಯ ಪಂತ್ ಚೌಕ್ ಪ್ರದೇಶದಲ್ಲಿ ಈ ದಾಳಿ ನಡೆದಿದ್ದು, ಗುಂಡಿನ ದಾಳಿ ನಡೆಸುತ್ತಿರುವ ಉಗ್ರರಿಗೆ ಭದ್ರತಾ ಪಡೆ ಸಿಬ್ಬಂದಿ ಅವರದೇ ಧಾಟಿಯಲ್ಲಿ ತಿರುಗೇಟು ನೀಡುತ್ತಿದ್ದಾರೆ. ಇನ್ನು ಭದ್ರತಾ ಪಡೆಗಳ ಗುಂಡಿಗೆ ಓರ್ವ ಉಗ್ರ ಹತನಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಅಂತೆಯೇ ಗಾಯಾಳು ಸಿಬ್ಬಂದಿಗಳಿಗೆ ಸೈನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸೇನಾ ಮೂಲಗಳ ಪ್ರಕಾರ ಸುಮಾರು 20ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಹೊತ್ತಿದ್ದ ವಾಹನ ಬೆಮಿನ್ ಕ್ಯಾಂಪ್ ನಿಂದ ಝೆವಾನ್ ಕ್ಯಾಂಪ್ ಗೆ ತೆರಳುತ್ತಿತ್ತು. ಈ ವೇಳೆ ಜಮ್ಮು-ಶ್ರೀನಗರ ಹೆದ್ದಾರಿಯ ಪಂತ್ ಚೌಕ್ ನಲ್ಲಿ ಅಡಗಿ ಕುಳಿತಿದ್ದ ಉಗ್ರರು ದಾಳಿ ನಡೆಸಿದ್ದಾರೆ. ಪ್ರಸ್ತುತ ಘಟನಾ ಪ್ರದೇಶದಲ್ಲಿ ಅಡಗಿ ಕುಳಿತಿರುವ ಉಗ್ರರಿಗಾಗಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.