ಡಿಎಂಕೆ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರುವುದಿಲ್ಲ: ಸ್ಟಾಲಿನ್
ತಮಿಳುನಾಡು ರಾಜಕೀಯದಲ್ಲಿ ಅನಿಶ್ಚಿತತೆ ಎದ್ದಿದ್ದು ಇದನ್ನೇ ಬಳಸಿಕೊಂಡು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರುವುದಿಲ್ಲ ಎಂದು...

Published On :
ಮುಂಬೈ: ತಮಿಳುನಾಡು ರಾಜಕೀಯದಲ್ಲಿ ಅನಿಶ್ಚಿತತೆ ಎದ್ದಿದ್ದು ಇದನ್ನೇ ಬಳಸಿಕೊಂಡು ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬರುವುದಿಲ್ಲ ಎಂದು ಡಿಎಂಕೆ ಕಾರ್ಯಕಾರಿ ಅಧ್ಯಕ್ಷ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ಸದ್ಯ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಎಐಎಡಿಎಂಕೆ ಸರ್ಕಾರ ಯಾವಾಗಬೇಕಾದರೂ ಪತನವಾಗಬಹುದು. ಇದನ್ನೇ ಬಳಸಿಕೊಂಡು ಹಿಂಬಾಗಿಲಿನಿಂದ ಡಿಎಂಕೆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಹಾಗೇ ಬಂದರೂ ಸರಿಯಾಗಿ ಸರ್ಕಾರವನ್ನು ನಡೆಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಪ್ರಜಾಪ್ರಭುತ್ವದ ಮಾನದಂಡಗಳ ವಿರುದ್ಧವಾಗಿ ಡಿಎಂಕೆ ಪಕ್ಷ ಎಂದೂ ನಡೆಯುವುದಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.
ಮುಂಬೈನ ಸ್ಥಳೀಯ ಡಿಎಂಕೆ ನಾಯಕನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಟಾಲಿನ್ ಅವರು, ಆಳ್ವಿಕೆ ಪಕ್ಷದ ಬಿಕ್ಕಟ್ಟಿನ ಕಾರಣದಿಂದಾಗಿ ತಮಿಳುನಾಡಿನಲ್ಲಿ ಅತೀ ಅನಿಶ್ಚಿತತೆ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರ ಹೆಚ್ಚು ದಿನ ಅಧಿಕಾರದಲ್ಲಿರುವುದಿಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.
ಇನ್ನು ನಿನ್ನೆ ಡಿಎಂಕೆ ನೇತೃತ್ವದಲ್ಲಿ ತಮಿಳುನಾಡಿನ ವಿರೋಧ ಪಕ್ಷಗಳ ನಿಯೋಗವು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಇ.ಕೆ ಪಳನಿಸ್ವಾಮಿ ನೇತೃತ್ವದ ಸರ್ಕಾರವು ಬಹುಮತ ಕಳೆದುಕೊಂಡಿದೆ. ಹೀಗಾಗಿ ಸದನದಲ್ಲಿ ವಿಶ್ವಾಸಮತ ಯಾಚನೆ ನಡೆಸುವಂತೆ ಸೂಚನೆ ನೀಡಲು ರಾಜ್ಯಪಾಲ ಸಿ. ವಿದ್ಯಾಸಾಗರ್ ಅವರಿಗೆ ನಿರ್ದೇಶನ ನೀಡಿ ಎಂದು ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


