ದೇಶ

"ಕೇಸರಿ" ಅಲ್ಲ: ರಾಜಕೀಯ ಸೇರ್ಪಡೆ ಕುರಿತು ಕಮಲ್ ಹಾಸನ್ ಪ್ರತಿಕ್ರಿಯೆ!

ನಟ ಕಮಲ್ ಹಾಸನ್ ಅವರು ತಮ್ಮ ರಾಜಕೀಯ ಪ್ರವೇಶದ ಕುರಿತು ಮಹತ್ವದ ಮಾಹಿತಿ ನೀಡಿದ್ದು, ತಾವ ಬಿಜೆಪಿ ಪಕ್ಷವನ್ನು ಸೇರುತ್ತಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

"ಕೇಸರಿ" ಅಲ್ಲ: ರಾಜಕೀಯ ಸೇರ್ಪಡೆ ಕುರಿತು ಕಮಲ್ ಹಾಸನ್ ಪ್ರತಿಕ್ರಿಯೆ!
ಕೇರಳ ಸಿಎಂ ಪಿಣರಾಯಿ ವಿಜಯನ್ ರೊಂದಿಗೆ ನಟ ಕಮಲ್ ಹಾಸನ್
Published On :
ತಿರುವನಂತಪುರಂ: ನಟ ಕಮಲ್ ಹಾಸನ್ ಅವರು ತಮ್ಮ ರಾಜಕೀಯ ಪ್ರವೇಶದ ಕುರಿತು ಮಹತ್ವದ ಮಾಹಿತಿ ನೀಡಿದ್ದು, ತಾವ ಬಿಜೆಪಿ ಪಕ್ಷವನ್ನು ಸೇರುತ್ತಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.
ನಟ ಕಮಲ್ ಹಾಸನ್ ಅವರ ರಾಜಕೀಯ ಪ್ರವೇಶದ ಸುದ್ದಿ ಹಳೆಯದೇ ಆದರೂ ಅವರು ಯಾವ ಪಕ್ಷ ಸೇರಲಿದ್ದಾರೆ ಎಂಬುದು ಇದೀಗ ತೀವ್ರ ಕುತೂಹಲ ಮೂಡಿಸಿದೆ. ಈ ಹಿಂದೆ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷದ ಕಾರ್ಯಕ್ರಮದಲ್ಲಿ ಪ್ರಧಾನ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದ ನಟ ಕಮಲ್ ಎನ್ ಡಿಐ ಮೈತ್ರಿಕೂಟದಲ್ಲಿ ಗುರುತಿಸಿಕೊಂಡಿರುವ ಎಐಎಡಿಎಂಕೆ ವಿರುದ್ಧ ಕಿಡಿಕಾರಿದ್ದರು. ಇದೀಗ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನು ಭೇಟಿ ಮಾಡುವ ಮೂಲಕ ತಾವು ಬಿಜೆಪಿ ಪಕ್ಷವನ್ನು ಸೇರುತ್ತಿಲ್ಲ ಎಂಬ ಸ್ಪಷ್ಟ ಸೂಚನೆಯನ್ನು ನಟ ಕಮಲ್ ಹಾಸನ್ ನೀಡಿದ್ದಾರೆ.
ಶುಕ್ರವಾರ ಕೇರಳಕ್ಕೆ ತೆರಳಿದ್ದ ನಟ ಕಮಲ್ ಹಾಸನ್ ಅವರು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರನ್ನು ತಿರುವನಂತಪುರದ ಕ್ಲಿಫ್ ಹೌಸ್‌ನಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಕುರಿತ ಭೇಟಿಯ ಚಿತ್ರಗಳನ್ನು ಸಿಎಂ ಪಿಣರಾಯಿ ವಿಜಯನ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಕಮಲ್ ನನ್ನ ಬೆಸ್ಟ್ ಫ್ರೆಂಡ್ ಎಂದು ಹೇಳಿದ್ದಾರೆ. ತಾವಿಬ್ಬರೂ ರಾಜಕೀಯದ ಬಗ್ಗೆ ಚರ್ಚಿಸಿದ್ದಾಗಿ, ಮುಖ್ಯವಾಗಿ ತಮಿಳುನಾಡು ಹಾಗೂ ದಕ್ಷಿಣದ ರಾಜಕೀಯದ ಬಗ್ಗೆ ಚರ್ಚಿಸಿದ್ದಾಗಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಹಾಸನ್, 'ನನಗೆ ರಾಜಕೀಯದಲ್ಲಿ ಆಸಕ್ತಿ ಇದ್ದು ಪಿಣರಾಯಿ ಅವರಿಂದ ಸಾಕಷ್ಟು ಕಲಿತಿದ್ದೇನೆ. ಅವರಿಂದ ಕಲಿಯುವುದು ಇನ್ನೂ ಸಾಕಷ್ಟಿದೆ. ಶೀಘ್ರದಲ್ಲೇ ನನ್ನ ರಾಜಕೀಯ ಪ್ರಯಾಣ ಆರಂಭವಾಗಲಿದೆ. ಆದರೆ ಖಂಡಿತಾ ಕೇಸರಿ ಅಲ್ಲ. ನನ್ನ ಚಿತ್ರ ಜೀವನವನ್ನು ಕಳೆದ 40 ವರ್ಷಗಳಿಂದ ನೋಡಿದ್ದೀರಿ. ನಾನು ಕೇಸರಿ ಮತ್ತು ಇತರೆ ಬಣ್ಣಗಳ ನಡುವೆ ಇರಲು ಬಯಸುತ್ತೇನೆ. ಹೀಗಾಗಿ ಖಂಡಿತಾ ಕೇಸರಿ ಅಲ್ಲ ಎಂದು ಹೇಳುವ ಮೂಲಕ ನಟ ಕಮಲ್ ಹಾಸನ್ ತಾವು ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.