'ನೂತನ ಸಚಿವರು ಹಿರಿಯ ನಾಗರಿಕರ ಕೂಟ': ಮೋದಿ ಸಂಪುಟ ಪುನರ್ ರಚನೆ ಕುರಿತು 'ಕೈ' ವ್ಯಂಗ್ಯ
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಸಂಪುಟಕ್ಕೆ ನಾಲ್ವರು ನಿವೃತ್ತ ಅಧಿಕಾರಿಗಳನ್ನು ಸೇರಿಸಿಕೊಂಡಿರುವುದನ್ನು...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಸಂಪುಟಕ್ಕೆ ನಾಲ್ವರು ನಿವೃತ್ತ ಅಧಿಕಾರಿಗಳನ್ನು ಸೇರಿಸಿಕೊಂಡಿರುವುದನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್, ಮೋದಿಯ ಈ ನಿರ್ಧಾರ ತಮ್ಮ ರಾಜಕೀಯ ಸಹೋದ್ಯೋಗಿಗಳ ಮೇಲೆ ನಂಬಿಕೆ ಇಲ್ಲ ಎಂಬುದನ್ನು ತೋರಿಸುತ್ತದೆ ಎಂದು ಹೇಳಿದೆ.
ಇಂದು ಪ್ರಧಾನಿ ಮೋದಿ ಸಂಪುಟ ಸೇರಿದ 9 ನೂತನ ಸಚಿವರು 'ಹಿರಿಯ ನಾಗರಿಕರ ಕೂಟ' ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್ ವಕ್ತಾರ ಮನಿಶ್ ತಿವಾರಿ ಅವರು, ದೇಶದಲ್ಲಿ ವ್ಯಕ್ತಿಯ ಸರಾಸರಿ ಮಧ್ಯಮ ವಯಸ್ಸು 27, ಹೊಸ ಪ್ರವೇಶಗಾರರ ಸರಾಸರಿ ವಯಸ್ಸು 60.44 ವರ್ಷಗಳು ಎಂದು ವಿವರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ, ಸಂಪುಟ ಪುನರ್ ರಚನೆ ಸರ್ಕಸ್ ಮಾಡುವ ಮೂಲಕ ಪ್ರಧಾನಿ ಮೋದಿ ಸಂಪುಟದ ಮೇಲಿನ ಹಿಡಿತ ಕಳೆದುಕೊಂಡಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೇ ಸಚಿವರನ್ನು ಕರೆದು ರಾಜಿನಾಮೆ ನೀಡುವಂತೆ ಸೂಚಿಸಿದ ವರದಿಗಳನ್ನು ನೋಡಿದರೆ ಅವರೇ ಸೂಪರ್ ಪ್ರಧಾನಿಯಂತೆ ಕಾಣಿಸುತ್ತಿದೆ ಎಂದಿದ್ದಾರೆ.
ಇಂದು ಬೆಳಗ್ಗೆಯಷ್ಟೇ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಟ್ವೀಟ್ ಮಾಡಿದ್ದ ತಿವಾರಿ, ವೈದ್ಯರ ಮೇಲೆ ದೈಹಿಕ ಹಲ್ಲೆ ನಡೆಸಿದ ಈ ಸಚಿವರಿಗೆ ಮೋದಿ ಆರೋಗ್ಯ ಖಾತೆ ಕೊಡಬಹುದು ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


