ದೇಶ

ಪ್ರಧಾನಿ ಮೋದಿ ಸಂಪುಟ ಪುನಾರಚನೆ: 9 ಹೊಸಮುಖಗಳಿಗೆ ಅವಕಾಶ!

ತೀವ್ರ ಕುತೂಹಲ ಕೆರಳಿಸಿದ್ದ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದ್ದು, 9 ಹೊಸ ಮುಖಗಳಿಗೆ ಕೇಂದ್ರ ಸಚಿವ ಸ್ಥಾನ ನೀಡಲಾಗುತ್ತಿದೆ.

ಪ್ರಧಾನಿ ಮೋದಿ ಸಂಪುಟ ಪುನಾರಚನೆ: 9 ಹೊಸಮುಖಗಳಿಗೆ ಅವಕಾಶ!
ಸಂಗ್ರಹ ಚಿತ್ರ
Published On :
ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದ್ದು, 9 ಹೊಸ ಮುಖಗಳಿಗೆ ಕೇಂದ್ರ ಸಚಿವ ಸ್ಥಾನ ನೀಡಲಾಗುತ್ತಿದೆ.
ಕರ್ನಾಟಕದಿಂದ ಬಿಜೆಪಿಯ ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ ಸೇರಿದಂತೆ ಒಂಬತ್ತು  ಹೊಸ ಮುಖಗಳನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಲಾಗುತ್ತಿದೆ. ಇಂದು ಬೆಳಗ್ಗೆ ಸುಮಾರ 10.30ಕ್ಕೆ  ದೆಹಲಿಯ ರಾಷ್ಟ್ರಪತಿಭವನದಲ್ಲಿ 9 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇನ್ನು ಇದೇ ಮೊದಲ ಬಾರಿಗೆ ಎಂಬಂತೆ ಪ್ರಧಾನಿ ನರೇಂದ್ರ ಮೋದಿ ಅವರು ನಿವೃತ್ತ ಅಧಿಕಾರಿಗಳಿಗೆ ಕೇಂದ್ರ ಸಚಿವ ಸ್ಥಾನ ನೀಡುತ್ತಿದ್ದು, ಭಾರತೀಯ ವಿದೇಶ ಸೇವೆಯ (ಐಎಫ್‌ಎಸ್‌) ನಿವೃತ್ತ ಅಧಿಕಾರಿ, ಪಂಜಾಬ್‌ನ ಹರದೀಪ್‌  ಸಿಂಗ್ ಪುರಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ, ಕೇರಳದ ಅಲ್ಫೋನ್ಸ್ ಕಣ್ಣನ್ ದಾನಮ್ ಅವರು ಕೇಂದ್ರ ಸಂಪುಟ ಸೇರುತ್ತಿದ್ದಾರೆ. ಈ ಮೂವರೂ ಅಧಿಕಾರಿಗಳು ಸಂಸತ್‌ ಸದಸ್ಯರಲ್ಲದಿದ್ದರೂ ಬಿಜೆಪಿ ವರಿಷ್ಠರು ಅಧಿಕಾರಿಗಳ ದಕ್ಷತೆ  ಆಧಾರ ಮೇಲೆ ಅವರಿಗೆ ಸ್ಥಾನ ನೀಡಿದ್ದಾರೆ.
ಸಂಪುಟ ಸೇರಲಿರುವ ಪ್ರಮುಖರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.