ಸರಗಳ್ಳತನ: ಕಳ್ಳರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿನಿಂದ ಕೆಳಗೆ ಜಿಗಿದ ಮಹಿಳೆ ಸಾವು
ಸರಗಳ್ಳತನ ಮಾಡಲು ದುಷ್ಕರ್ಮಿಗಳು ಯತ್ನ ನಡೆಸುತ್ತಿದ್ದ ವೇಳೆ ಪ್ರತಿರೋಧ ವ್ಯಕ್ತಪಡಿಸುತ್ತಿದ್ದ ಮಹಿಳೆಯೊಬ್ಬರು ಚಲಿಸುವ ರೈಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿ ರೈಲ್ವೇ ನಿಲ್ದಾಣದಲ್ಲಿ ಸೋಮವಾರ...

Published On :
ನವದೆಹಲಿ: ಸರಗಳ್ಳತನ ಮಾಡಲು ದುಷ್ಕರ್ಮಿಗಳು ಯತ್ನ ನಡೆಸುತ್ತಿದ್ದ ವೇಳೆ ಪ್ರತಿರೋಧ ವ್ಯಕ್ತಪಡಿಸುತ್ತಿದ್ದ ಮಹಿಳೆಯೊಬ್ಬರು ಚಲಿಸುವ ರೈಲಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೆಹಲಿ ರೈಲ್ವೇ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.
ದೆಹಲಿಯ ಸಡರ್ ಬಡಾಪ್ ಸಮೀಪ ಮಿಥಾಯಿ ಪುಲ್ನರ್ ಬಳಿ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ದೆಹಲಿ ವಿಶ್ವವಿದ್ಯಾಲಯದಲ್ಲಿ ಸೀಟು ಪಡೆದುಕೊಂಡಿದ್ದ ಪುತ್ರ ಗೌರವ್ ಜೊತೆಗೆ ಸುಧೀರ್ ಬನ್ಸಾಲ್ (40) ಎಂಬ ಮಹಿಳೆ ರಾಜಸ್ತಾನದ ಯೋಗ ಎಕ್ಸ್ ಪ್ರೆಸ್ ನಲ್ಲಿ ತೆರಳುತ್ತಿದ್ದರು. ರೈಲಿನ ಪ್ರವೇಶ ದ್ವಾರದಲ್ಲಿ ಮಹಿಳೆ ನಿಂತುಕೊಂಡಿದ್ದರು. ಈ ವೇಳೆ ಸ್ಥಳಕ್ಕೆ ಬಂದಿರುವ ದುಷ್ಕರ್ಮಿಗಳು ಮಹಿಳೆಯ ಬ್ಯಾಗ್ ಹಾಗೂ ಸರ ಕಸಿದುಕೊಳ್ಳಲು ಯತ್ನಿಸಿದ್ದಾರೆ.
ಈ ವೇಳೆ ನಿಯಂತ್ರಣ ತಪ್ಪಿರುವ ಮಹಿಳೆ ರೈಲ್ವೇ ಹಳಿಯ ಮೇಲೆ ಬಿದ್ದಿದ್ದಾರೆ. ಮಹಿಳೆಯನ್ನು ರಕ್ಷಿಸಲು ಅವರ ಪುತ್ರ ಸಾಕಷ್ಟು ಯತ್ನ ನಡೆಸಿದ್ದಾರೆ. ಆದರೆ, ಯತ್ನ ವಿಫಲಾಗಿತ್ತು. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಪರಿಣಾಮ ಮಹಿಳೆ ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ದುಷ್ಕರ್ಮಿಗಳು ಬ್ಯಾಗ್ ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಗಳಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


