ದೇಶ

ಚೀನಾಗೆ ಹೊರಡುವ ಕೆಲವೇ ಗಂಟೆಗಳ ಮುನ್ನ ಸಚಿವ ಸಂಪುಟ ವಿಸ್ತರಣೆ: ಮೋದಿಯನ್ನು ಪ್ರಶ್ನಿಸಿದ ಶಿವಸೇನೆ

ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಗೆ ತೆರಳುವ ಕೆಲವೇ ಗಂಟೆಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿರುವುದನ್ನು ಎನ್ ಡಿಎ ಮಿತ್ರಪಕ್ಷ ಶಿವಸೇನೆ ಪ್ರಶ್ನಿಸಿದೆ.

ಚೀನಾಗೆ ಹೊರಡುವ ಕೆಲವೇ ಗಂಟೆಗಳ ಮುನ್ನ ಸಚಿವ ಸಂಪುಟ ವಿಸ್ತರಣೆ: ಮೋದಿಯನ್ನು ಪ್ರಶ್ನಿಸಿದ ಶಿವಸೇನೆ
ಶಿವಸೇನೆ
Published On :
ಮಹಾರಾಷ್ಟ್ರ: ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಗೆ ತೆರಳುವ ಕೆಲವೇ ಗಂಟೆಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿರುವುದನ್ನು ಎನ್ ಡಿಎ ಮಿತ್ರಪಕ್ಷ ಶಿವಸೇನೆ ಪ್ರಶ್ನಿಸಿದೆ. 
ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಲೇಖನ ಪ್ರಕಟಗೊಂಡಿದ್ದು, ಚೀನಾದ ಬ್ರಿಕ್ಸ್ ಶೃಂಗಸಭೆ ನರೇಂದ್ರ ಮೋದಿ ಅವರಿಗೆ ಮಹತ್ವದ್ದಾಗಿತ್ತು, ಆದ್ದರಿಂದ ತರಾತುರಿಯಲ್ಲಿ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡುವ ಅವಶ್ಯಕಾತೆ ಇರಲಿಲ್ಲ ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ. 
ಪ್ರಧಾನಿ ನರೇಂದ್ರ ಮೋದಿ ತರಾತುರಿಯಲ್ಲಿ ಸಚಿವ ಸಂಪುಟ ಪುನಾರಚನೆ ಮಾಡಿದ್ದು, ಒಂದು ವೇಳೆ ಸಚಿವ ಸಂಪುಟ ಪುನಾರಚನೆ ಮಾಡದೇ ಇದ್ದಿದ್ದರೆ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ನಿಮ್ಮನ್ನು ಭೇಟಿ ಮಾಡುತ್ತಿರಲಿಲ್ಲವೇ ಎಂದು ಶಿವಸೇನೆ ವ್ಯಂಗ್ಯವಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.