ದೇಶ

ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!

102 ಪ್ರಯಾಣಿಕರನ್ನು ಹೊತ್ತಿದ್ದ ಏರ್ ಇಂಡಿಯಾ ವಿಮಾನ ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಭಾರಿ ಅವಘಡದಿಂದ ತಪ್ಪಿಸಿಕೊಂಡಿದ್ದು, ವಿಮಾನದ ಚಕ್ರಗಳು ಮೋರಿಗೆ ಸಿಲುಕಿ ಹಾಕಿಕೊಳ್ಳುವ ಮೂಲಕ ಕೆಲಕಾಲ ಪ್ರಯಾಣಿಕರನ್ನು ಆಂತಕಕ್ಕೀಡು ಮಾಡಿತ್ತು.

ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ಅನಾಹುತ!
ಮೋರಿಗಿಳಿದ ವಿಮಾನದ ಚಕ್ರಗಳು
Published On :
ಕೊಚ್ಚಿ: 102 ಪ್ರಯಾಣಿಕರನ್ನು ಹೊತ್ತಿದ್ದ ಏರ್ ಇಂಡಿಯಾ ವಿಮಾನ ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಭಾರಿ ಅವಘಡದಿಂದ ತಪ್ಪಿಸಿಕೊಂಡಿದ್ದು, ವಿಮಾನದ ಚಕ್ರಗಳು ಮೋರಿಗೆ ಸಿಲುಕಿ ಹಾಕಿಕೊಳ್ಳುವ ಮೂಲಕ ಕೆಲಕಾಲ  ಪ್ರಯಾಣಿಕರನ್ನು ಆಂತಕಕ್ಕೀಡು ಮಾಡಿತ್ತು.
ಮೂಲಗಳ ಪ್ರಕಾರ ಏರ್ ಇಂಡಿಯಾ ವಿಮಾನ ಸಂಖ್ಯೆ 737-800 ವಿಮಾನ ಇಂದು ಬೆಳಗ್ಗೆ 2.39ಕ್ಕೆ ಅಬುದಾಬಿನಿಂದ ಕೊಚ್ಚಿ ಏರ್‌ಪೋರ್ಟ್‌ಗೆ ಬಂದಿಳಿದಿತ್ತು. 2.40ಕ್ಕೆ ಪೈಲೆಟ್‌ ವಿಮಾನವನ್ನು ಹಿಂಬದಿಯಿಂದ ಪಾರ್ಕ್‌  ಮಾಡುತ್ತಿದ್ದರು. ಈ ವೇಳೆ ವಿಮಾನದ ಹಿಂಬದಿಯ ಚಕ್ರಗಳು ರಸ್ತೆ ಬದಿಯಲ್ಲಿರುವ ಕಾಲುವೆಗೆ ಬಿದ್ದು ಸಿಲುಕಿಕೊಂಡಿವೆ. ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರು ಆತಂಕಕ್ಕೀಡಾಗಿದ್ದರು. ಆದರೆ ಅದೃಷ್ಟವಶಾತ್ ಯಾರಿಗೂ  ಯಾವುದೇ ತೊಂದರೆಯಾಗಿಲ್ಲ.
ಪ್ರಯಾಣಿಕರೆಲ್ಲರನ್ನು ಸುರಕ್ಷಿತವಾಗಿ ವಿಮಾನದಿಂದ ಇಳಿಸಿ ಹೊರಗಡೆ ಕಳುಹಿಸಲಾಗಿದೆ. ಮೂಲಗಳ ಪ್ರಕಾರ ವಿಮಾನದಲ್ಲಿ 102 ಪ್ರಯಾಣಿಕರು ಹಾಗೂ ಪೈಲಟ್ ಗಳು ಸೇರಿದಂತೆ 6 ಮಂದಿ ಸಿಬ್ಬಂದಿಗಳು ಇದ್ದರು ಎಂದು  ತಿಳಿದುಬಂದಿದೆ. ಇನ್ನು ಈ ಘಟನೆ ಟೇಕ್‌ ಆಫ್‌ ವೇಳೆ ನಡೆದಿದ್ದರೇ ವಿಮಾನ ಪತನಗೊಳ್ಳುವ ಸಾಧ್ಯತೆ ಹೆಚ್ಚಾಗಿತ್ತು ಎನ್ನಲಾಗಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ಈ ಅವಘಡದಿಂದ ಪ್ರಯಾಣಿಕರೂ ಸೇರಿದಂತೆ ಯಾರಿಗೂ ತೊಂದರೆಯಾಗಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.