ದೇಶ

ಬ್ರಿಕ್ಸ್ ಸಮಾವೇಶ: ಪಾಕ್ ಮುಖವಾಡ ಬಯಲು ಮಾಡಲು ಇದು ಉತ್ತಮ ಅವಕಾಶ- ಕಾಂಗ್ರೆಸ್

ಪಾಕಿಸ್ತಾನದ ಮುಖವಾಡ ಬಯಲು ಮಾಡಲು 9ನೇ ಬ್ರಿಕ್ಸ್ ಸಮಾವೇಶ ಉತ್ತಮ ಅವಕಾಶವಾಗಿದೆ ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ...

ಬ್ರಿಕ್ಸ್ ಸಮಾವೇಶ: ಪಾಕ್ ಮುಖವಾಡ ಬಯಲು ಮಾಡಲು ಇದು ಉತ್ತಮ ಅವಕಾಶ- ಕಾಂಗ್ರೆಸ್
ಸಂಗ್ರಹ ಚಿತ್ರ
Published On :
ನವದೆಹಲಿ: ಪಾಕಿಸ್ತಾನದ ಮುಖವಾಡ ಬಯಲು ಮಾಡಲು 9ನೇ ಬ್ರಿಕ್ಸ್ ಸಮಾವೇಶ ಉತ್ತಮ ಅವಕಾಶವಾಗಿದೆ ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ನಾಯಕ ಮೀಮ್ ಅಫ್ಜಲ್, ಪಾಕಿಸ್ತಾನದ ಭಯೋತ್ಪಾದನಾ ಕೃತ್ಯಗಳ ವಿರುದ್ಧ ಬ್ರಿಕ್ಸ್ ರಾಷ್ಟ್ರಗಳು ಉತ್ತಮ ಕ್ರಮಗಳನ್ನು ಕೈಗೊಂಡಿದೆ ಎಂದು ನಂಬಿದ್ದೇವೆ. ಒಂದು ವೇಳೆ ಈ ರಾಷ್ಟ್ರಗಳು ಒಗ್ಗೂಡಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ಹಾಗೂ ಭಯೋತ್ಪದಾನೆ ವಿರುದ್ಧ ಕೆಲಸ ಮಾಡಿದ್ದೇ ಆದರೆ, ಪಾಕಿಸ್ತಾನದ ಮುಖವಾಡ ಬಯಲಾಗಲಿದೆ ಎಂದು ಹೇಳಿದ್ದಾರೆ. 
ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುವವಲ್ಲಿ ಚೀನಾ ರಾಷ್ಟ್ರ ಪ್ರಮುಖ ಪಾತ್ರವಹಿಸುತ್ತದೆ. ಬ್ರಿಕ್ಸ್ ರಾಷ್ಟ್ರಗಳು ಭಯೋತ್ಪಾದನೆ ವಿರುದ್ಧ ದನಿಗೂಡಿಸಿದ್ದು ಮುಂದಿನ ದಿನಗಳಲ್ಲಿ ಚೀನಾ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂಬುದು ಮುಖ್ಯವಾಗುತ್ತೆ. ಭಯೋತ್ಪಾದನೆ ಕುರಿತಂತೆ ಪಾಕಿಸ್ತಾನದ ಮೇಲೆ ಚೀನಾ ಒತ್ತಡ ಹೇರಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.