ದೇಶ

ಮೋಹನ್ ಭಾಗವತ್ ಕಾರ್ಯಕ್ರಮಕ್ಕಾಗಿ ಕೋಲ್ಕತಾ ಆಡಿಟೋರಿಯಂ ಬುಕ್ಕಿಂಗ್ ರದ್ದುಗೊಳಿಸಿದ ಮಮತಾ ಸರ್ಕಾರ

ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಕಾರ್ಯಕ್ರಮ ನಿಗದಿಯಾಗಿದ್ದ ಆಗಿದ್ದ ಕೋಲ್ಕತಾದಲ್ಲಿನ ರಾಜ್ಯ...

ಮೋಹನ್ ಭಾಗವತ್ ಕಾರ್ಯಕ್ರಮಕ್ಕಾಗಿ ಕೋಲ್ಕತಾ ಆಡಿಟೋರಿಯಂ ಬುಕ್ಕಿಂಗ್ ರದ್ದುಗೊಳಿಸಿದ ಮಮತಾ ಸರ್ಕಾರ
ಮೋಹನ್ ಭಾಗವತ್
Published On :
ಕೋಲ್ಕತಾ: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಕಾರ್ಯಕ್ರಮ ನಿಗದಿಯಾಗಿದ್ದ ಆಗಿದ್ದ ಕೋಲ್ಕತಾದಲ್ಲಿನ ರಾಜ್ಯ ಸರ್ಕಾರದ ಆಡಿಟೋರಿಯಂ ಬುಕ್ಕಿಂಗ್ ಅನ್ನು ಅಧಿಕಾರಿಗಳು ರದ್ದುಗೊಳಿಸಿದ್ದಾರೆ.
ಅಕ್ಟೋಬರ್ 3ರಂದು ಮೋಹನ್ ಭಾಗವತ್ ಅವರು ಈ ಆಡಿಟೋರಿಯಂನಲ್ಲಿ ಭಾಷಣ ಮಾಡಲಿದ್ದರು. ಆದರೆ ಅಧಿಕಾರಿಗಳು ಡಿಢೀರ್ ಬುಕ್ಕಿಂಗ್ ರದ್ದುಗೊಳಿಸಿರುವುದನ್ನು ಆರ್ಎಸ್ಎಸ್ ತೀವ್ರವಾಗಿ ಖಂಡಿಸಿದೆ. 
ಇನ್ನು ಆಡಿಟೋರಿಯಂ ನವೀಕರಣಕ್ಕಾಗಿ ಮೋಹನ್ ಭಾಗವತ್ ಕಾರ್ಯಕ್ರಮದ ಬುಕ್ಕಿಂಗ್ ಅನ್ನು ರದ್ದುಗೊಳಿಸಲಾಗಿದೆ. ನವೀಕರಣ ಕಾರ್ಯ ನಡೆಯುತ್ತಿರುವ ಸಂದರ್ಭದಲ್ಲಿ ಭದ್ರತೆ ಮತ್ತು ಸುರಕ್ಷತೆ ಒದಗಿಸುವುದು ಕಷ್ಟ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಅಕ್ಟೋಬರ್ 3ರ ಕಾರ್ಯಕ್ರಮಕ್ಕಾಗಿ ಕಳೆದ ಜೂನ್ ನಲ್ಲಿ ಮಹಾಜಾತಿ ಸದನ ಆಡಿಟೋರಿಯಂ ಅನ್ನು ಬುಕ್ ಮಾಡಲಾಗಿತ್ತು. ಆದರೆ ನವೀಕರಣಕ್ಕಾಗಿ ಕಳೆದ ಗುರುವಾರ ಬುಕ್ಕಿಂಗ್ ಅನ್ನು ರದ್ದುಗೊಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.