ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಹೇಳಿಕೆ ಖಂಡನೀಯ, ನಾಚಿಕೆಗೇಡು: ಕೇಂದ್ರ ಸರ್ಕಾರ
ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಹತ್ಯೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ಖಂಡನೀಯ ಎಂದು ಕೇಂದ್ರ ಸರ್ಕಾರ ಹೇಳಿದೆ.

Published On :
ನವದೆಹಲಿ: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಹತ್ಯೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆ ಖಂಡನೀಯ ಎಂದು ಕೇಂದ್ರ ಸರ್ಕಾರ ಹೇಳಿದೆ.
ಈ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಿಗಳಾಗಿದ್ದಾರೆ. ಅವರು ಈಗ ಯಾವುದೇ ಒಂದು ಪಕ್ಷಕ್ಕೆ ಸೀಮಿತರಾದವರಲ್ಲ. ಪತ್ರಕರ್ತೆ ಹತ್ಯೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದು ತರುತ್ತಿರುವುದು ಸರಿಯಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರದಲ್ಲಿದ್ದು, ಅಲ್ಲಿನ ಕಾನೂನು ಸುವ್ಯವಸ್ಥೆ ಜವಾಬ್ದಾರಿ ಅಲ್ಲಿನ ರಾಜ್ಯ ಸರ್ಕಾರದ್ದೇ ಆಗಿರುತ್ತದೆ. ಹೀಗಾಗಿ ಪ್ರಕರಣದಲ್ಲಿ ಪ್ರಧಾನಿ ಮೋದಿ ಅವರನ್ನು ಟೀಕಿಸುವುದು ಸರಿಯಲ್ಲ ಎಂದು ಗಡ್ಕರಿ ಹೇಳಿದ್ದಾರೆ.
ಇದೇ ವೇಳೆ ರಾಹುಲ್ ಗಾಂಧಿ ಅವರು ಆರೋಪ ನಿರಾಧಾರವಾಗಿದ್ದು, ಅವರ ಹೇಳಿಕೆ ನಾಚಿಕೇಗೇಡು ಎಂದು ಅವರು ಟೀಕಿಸಿದ್ದಾರೆ.
ಇಂದು ಬೆಳಗ್ಗೆ ದೆಹಲಿಯಲ್ಲಿ ಮಾತನಾಡಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಅಹಿಂಸೆಯೇ ಈ ದೇಶದ ಇತಿಹಾಸ. ಕೊಲೆಯನ್ನು ಯಾರೂ ಸಮರ್ಥಿಸುವಂತಿಲ್ಲ. ಪ್ರಧಾನಿ ಮೋದಿ ಅವರೋರ್ವ ಕೌಶಲ ಹಿಂದೂ ರಾಜಕಾರಣಿ. ಮೋದಿ ಏನೇ ಹೇಳಿದರೂ ಅದರಲ್ಲಿ ಎರಡು ಅರ್ಥವಿರುತ್ತದೆ. ಪ್ರಧಾನಿ ಮೋದಿ ಮೌನಿಯಲ್ಲ, ತಮ್ಮ ವಿರುದ್ಧ ಧನಿ ಎತ್ತಿದವರ ಧನಿ ಅಡಗಿಸುತ್ತಾರೆ. ಬಿಜೆಪಿ-ಆರ್ ಎಸ್ ಎಸ್ ಸಿದ್ಧಾಂತಗಳ ಬಗ್ಗೆ ಮಾತನಾಡಿದರೆ ಮತೀಯವಾದಿಗಳು ಕೊಲ್ಲುತ್ತಾರೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್New DelhiPM Modiಪ್ರಧಾನಿ ಮೋದಿRahul Gandhiರಾಹುಲ್ ಗಾಂಧಿNitin Gadkariನಿತಿನ್ ಗಡ್ಕರಿಗೌರಿ ಲಂಕೇಶ್ ಹತ್ಯೆGauri Lankesh Death
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


