ದೇಶ

ನನಗೆ ಎಐಎಡಿಎಂಕೆಯ ಎಲ್ಲಾ ಶಾಸಕರ ಬೆಂಬಲ ಇದೆ: ತಮಿಳುನಾಡು ಸಿಎಂ ಪಳನಿಸ್ವಾಮಿ

ನಮ್ಮ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ, ಎಐಎಡಿಎಂಕೆಯ ಎಲ್ಲಾ ಶಾಸಕರ ಬೆಂಬಲ ನನಗೆ ಇದೆ ಎಂದು ತಮಿಳುನಾಡು...

ನನಗೆ ಎಐಎಡಿಎಂಕೆಯ ಎಲ್ಲಾ ಶಾಸಕರ ಬೆಂಬಲ ಇದೆ: ತಮಿಳುನಾಡು ಸಿಎಂ ಪಳನಿಸ್ವಾಮಿ
ಇಕೆ ಪಳನಿಸ್ವಾಮಿ
Published On :
ಕೊಯಮತ್ತೂರು: ನಮ್ಮ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದೆ, ಎಐಎಡಿಎಂಕೆಯ ಎಲ್ಲಾ ಶಾಸಕರ ಬೆಂಬಲ ನನಗೆ ಇದೆ ಎಂದು ತಮಿಳುನಾಡು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು ಬುಧವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಳನಿಸ್ವಾಮಿ, ಸ್ಪೀಕರ್ ಸೇರಿದಂತೆ ಎಐಎಡಿಎಂಕೆ 135 ಶಾಸಕರನ್ನು ಹೊಂದಿದ್ದು, ಸರ್ಕಾರಕ್ಕೆ ಎಲ್ಲಾ ಶಾಸಕರ ಬೆಂಬಲ ಇದೆ ಎಂದು ಹೇಳಿದ್ದಾರೆ.
ನಿನ್ನೆ ತಮ್ಮ ನೇತೃತ್ವದಲ್ಲಿ ಚೆನ್ನೈನಲ್ಲಿ ನಡೆದ ಸಭೆಯಲ್ಲಿ 109 ಶಾಸಕರು ಭಾಗಿಯಾಗಿದ್ದರು. ವೈಯಕ್ತಿಕ ಕಾರಣಗಳಿಂದ ಉಳಿದ ಶಾಸಕರು ಭಾಗಿಯಾಗಿಲ್ಲ. ಆದರೆ ಸರ್ಕಾರಕ್ಕೆ ಅವರ ಬೆಂಬಲ ಇದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.
ವರದಿಗಳ ಪ್ರಕಾರ, ಎಐಎಡಿಎಂಕೆ 17 ಬಂಡಾಯ ಶಾಸಕರು ಇನ್ನೂ ಪುದುಚೇರಿಯ ರೆಸಾರ್ಟ್ ನಲ್ಲಿ ತಂಗಿದ್ದು, ಪಳನಿಸ್ವಾಮಿ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ.
ಕಳೆದ ಆಗಸ್ಟ್ 22ರಂದು ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಬೆಂಬಲಿತ 19 ಶಾಸಕರು ರಾಜ್ಯಪಾಲ ಸಿಎಚ್ ವಿದ್ಯಾಸಾಗರ್ ರಾವ್ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಕಳೆದುಕೊಂಡಿದ್ದು, ಅವರನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.