1993ರ ಮುಂಬೈ ಸರಣಿ ಸ್ಫೋಟ: ಅಬು ಸಲೇಂ ಗೆ ಜೀವಾವಧಿ ಶಿಕ್ಷೆ, ರಹೀರ್ ಮರ್ಚೆಂಟ್ ಗೆ ಗಲ್ಲು
ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಕುರಿತ ತೀರ್ಪು ಹೊರಬಿದ್ದಿದ್ದು ಪಾತಕಿ ಅಬು ಸಲೇಂಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮತ್ತೊಬ್ಬ ಅಪರಾಧಿ ರಹೀರ್ ಮರ್ಚೆಂಟ್ ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.

Published On :
ಮುಂಬೈ: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಕುರಿತ ತೀರ್ಪು ಹೊರಬಿದ್ದಿದ್ದು ಪಾತಕಿ ಅಬು ಸಲೇಂಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮತ್ತೊಬ್ಬ ಅಪರಾಧಿ ರಹೀರ್ ಮರ್ಚೆಂಟ್ ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.
ಪ್ರಕರಣದ ಪ್ರಮುಖ ಅಪರಾಧಿ ಅಬುಸಲೇಂಗೆ ಜೀವಾವಧಿ ಶಿಕ್ಷೆ ಹಾಗೂ ಕರಾಮುಲ್ಲಾ ಖಾನ್ಗೂ ಜೀವಾವಧಿ ಜತೆಗೆ 2 ಲಕ್ಷ ರೂ ದಂಡ ವಿಧಿಸಿ ಮುಂಬೈನ ಟಾಡಾ ನ್ಯಾಯಾಲಯ ತೀರ್ಪು ನೀಡಿದೆ.
ಫಿರೋಜ್ ಖಾನ್ ಮತ್ತು ತಾಹಿರ್ ಮರ್ಚೆಂಟ್ಗೆ ಟಾಡಾ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಇನ್ನು ಸಿದ್ದಿಕೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಬುಸಲೇಂ ಸೇರಿ ಒಟ್ಟು ಐವರಿಗೆ ಇಂದು ಶಿಕ್ಷೆ ಪ್ರಕಟಗೊಂಡಿದೆ.
ಕರಿಮುಲ್ಲಾ ಖಾನ್ ಗೆ ಜೀವಾವಧಿ ಶಿಕ್ಷೆ ರಿಯಾದ್ ಸಿದ್ಧಕಿಗೆ 10 ವರ್ಷಗಳ ಶಿಕ್ಷೆ ನೀಡಿ ಟಾಡಾ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಕರಣದ ಮಾಸ್ಟರ್ ಮೈಂಡ್ ಮುಸ್ತಫಾ ದೊಸ್ಸಾ ಸೇರಿದಂತೆ ಆರು ಮಂದಿಗಳು ಅಪರಾಧಿಗಳು ಎಂದು ಹೇಳಿ ಜೂನ್ 16 ರಂದು ಟಾಡಾ ನ್ಯಾಯಾಲಯ ತೀರ್ಪು ನೀಡಿತ್ತು.
24 ವರ್ಷಗಳ ನಂತರ ಟಾಡಾ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಪ್ರಕರಣದ 6ನೇ ಆರೋಪಿ ಮುಸ್ಥಪಾ ದೊಸ್ಸಾ ಸಾವನ್ನಪ್ಪಿದ್ದಾನೆ, ಅಬುಸಲೇಂ ನನ್ನು 2005 ರಲ್ಲಿ ಪೋರ್ಚುಗಲ್ ನಿಂದ ಬಂಧಿಸಿ ಕರೆತರಲಾಗಿತ್ತು, 1993ರಲ್ಲಿ ನಡೆದ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿ, 713 ಮಂದಿ ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜೀವಾವಧಿAbu Salemಶಿಕ್ಷೆLife imprisonmentMumbai blastsಅಬು ಸಲೇಂಟಾಡಾ ಕೋರ್ಟ್Terrorist and Disruptive Activity1993ರ ಮುಂಬೈ ಸರ್ಣಿ ಬಾಂಬ್ ಸ್ಫೋಟ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


