ದೇಶ

ಮುಂಬೈ: ನಿರ್ಮಾಣ ಹಂತದ ಕಟ್ಟಡದಲ್ಲಿ ಅಗ್ನಿ ಅವಘಡ- 6 ಸಾವು, 11 ಜನರಿಗೆ ಗಾಯ

ವಾಣಿಜ್ಯ ನಗರಿ ಮುಂಬೈನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 11 ಮಂದಿಗೆ...

ಮುಂಬೈ: ನಿರ್ಮಾಣ ಹಂತದ ಕಟ್ಟಡದಲ್ಲಿ ಅಗ್ನಿ ಅವಘಡ- 6 ಸಾವು, 11 ಜನರಿಗೆ ಗಾಯ
ಸಂಗ್ರಹ ಚಿತ್ರ
Published On :
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 11 ಮಂದಿಗೆ ಗಾಯವಾಗಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. 
ಜುಹುವಿನ ಕಿಶೋರ್ ಕುಮಾರ್ ಗಾರ್ಡೆನ್ ಬಳಿಯಿರುವ ಪ್ರಾರ್ಥನಾ ಕಟ್ಟಡದಲ್ಲಿ ಕಳೆದ ರಾತ್ರಿ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಕಟ್ಟಡದಲ್ಲಿದ್ದ 6 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 
ಘಟನೆಯಲ್ಲಿ 9 ಪುರುಷರು, ಇಬ್ಬರು ಮಹಿಳೆಯರು ಸೇರಿದಂತೆ 11 ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 8 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 
ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಅಧಿಕಾರಿಗಳು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಮುಂಬೈ ಪೊಲೀಸ್ ವಕ್ತಾರೆ ರಶ್ಮಿ ಕರಂದಿಕರ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.