ದೇಶ

ಕೊಯಮತ್ತೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದು ನಾಲ್ವರು ಸಾವು, ಹಲವರು ಸಿಲುಕಿರುವ ಶಂಕೆ

ನಗರದ ಹೊರವಲಯದ ಸೋಮನೂರಿನಲ್ಲಿ ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದುಬಿದ್ದು ಕನಿಷ್ಠ ನಾಲ್ವರು ಮೃತಪಟ್ಟಿರುವ....

ಕೊಯಮತ್ತೂರು: ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದು ನಾಲ್ವರು ಸಾವು, ಹಲವರು ಸಿಲುಕಿರುವ ಶಂಕೆ
ಬಸ್ ನಿಲ್ದಾಣ
Published On :
ಕೊಯಮತ್ತೂರು: ನಗರದ ಹೊರವಲಯದ ಸೋಮನೂರಿನಲ್ಲಿ ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದುಬಿದ್ದು ಕನಿಷ್ಠ ನಾಲ್ವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಹಲವು ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ತಂಗಿದ್ದ ವೇಳೆಯೇ ಮೇಲ್ಛಾವಣಿ ಕುಸಿದಿದ್ದು, ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಮತ್ತು ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಪ್ರತ್ಯಕ್ಷ ದರ್ಶಿಗಳ ಪ್ರಕಾರ, ಸುಮಾರು 50 ಅಡಿ ವಿಸ್ತಾರದ ಬಸ್ ನಿಲ್ದಾಣದಡಿ ಬಸ್ ಚಾಲಕರೊಬ್ಬರು ಸೇರಿದಂತೆ ಹಲವಾರು ಮಂದಿ ನಿಂತಿದ್ದರು. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದಿದ್ದಾರೆ.
ಸ್ಥಳಕ್ಕೆ ಗ್ರಾಮೀಣ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಗಾಯಗೊಂಡವರನ್ನು ಕೊಯಮತ್ತೂರಿನ ಸರ್ಕಾರಿ ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.