ಟಿ20: ಚೇಸಿಂಗ್‌ನಲ್ಲಿ ಗರಿಷ್ಠ ರನ್ ಸಿಡಿಸಿ ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮುಟ್ಟಿದ್ದೇಲ್ಲಾ ದಾಖಲೆಗಳಾಗುತ್ತಿವೆ. ಇದೀಗ ಶ್ರೀಲಂಕಾ ವಿರುದ್ಧದ ಏಕೈಕ ಟಿ20 ಪಂದ್ಯದಲ್ಲಿ 82 ರನ್ ಸಿಡಿಸಿರುವ ಮೂಲಕ ಚೇಸಿಂಗ್ ನಲ್ಲಿ...

Published On :
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮುಟ್ಟಿದ್ದೇಲ್ಲಾ ದಾಖಲೆಗಳಾಗುತ್ತಿವೆ. ಇದೀಗ ಶ್ರೀಲಂಕಾ ವಿರುದ್ಧದ ಏಕೈಕ ಟಿ20 ಪಂದ್ಯದಲ್ಲಿ 82 ರನ್ ಸಿಡಿಸಿರುವ ಮೂಲಕ ಚೇಸಿಂಗ್ ನಲ್ಲಿ 1016 ರನ್ ಗಳ ದಾಖಲೆ ಮಾಡಿದ್ದಾರೆ.
50 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಒಟ್ಟಾರೆ 1830 ರನ್ ಸಿಡಿಸಿದ್ದಾರೆ. ಇದರಲ್ಲಿ 1016 ರನ್ ಗಳು ಚೇಸಿಂಗ್ ವೇಳೆ ಹರಿದು ಬಂದಿದೆ. ಇನ್ನು ಮಾಜಿ ಕ್ರಿಕೆಟಿಗ ಬ್ರೆಂಡಮ್ ಮೆಕಲಮ್ ಅವರು ಚೇಸಿಂಗ್ ನಲ್ಲಿ 1006 ರನ್ ಸಿಡಿಸಿ ಅಗ್ರಸ್ಥಾನದಲ್ಲಿದ್ದರು. ಈ ದಾಖಲೆಯನ್ನು ಕೊಹ್ಲಿ ಅಳಿಸಿ ಹಾಕಿದ್ದಾರೆ.
ಕೊಹ್ಲಿ ಟಿ20ಯಲ್ಲಿ 1830 ರನ್ ಗಳಿಸುವ ಮೂಲಕ ನ್ಯೂಜಿಲೆಂಡ್ ತಂಡದ ಮಾರ್ಟಿನ್ ಗುಪ್ಟಿಲ್ ದಾಖಲೆಯನ್ನು ಸರಿಗಟ್ಟಿದ್ದು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಇನ್ನು 60 ರನ್ ಸಿಡಿಸಿದರೇ ಶ್ರೀಲಂಕಾದ ಮಾಜಿ ಆಟಗಾರ ತಿಲಕರತ್ನೆ ದಿಲ್ಶನ್ ದಾಖಲೆಯನ್ನು ಅಳಿಸಿ ಹಾಕಲಿದ್ದಾರೆ.
ನ್ಯೂಜಿಲೆಂಡ್ ತಂಡದ ಮಾಜಿ ಆಟಗಾರ ಬ್ರೆಂಡಮ್ ಮೆಕುಲಮ್ 71 ಪಂದ್ಯಗಳಲ್ಲಿ 2140 ರನ್ ಸಿಡಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


