ಉ.ಪ್ರ. ವಿಧಾನಪರಿಷತ್ ಚುನಾವಣೆ: ಸಿಎಂ ಯೋಗಿ ಆದಿತ್ಯನಾಥ್ ಅವಿರೋಧ ಆಯ್ಕೆ
ಉತ್ತರ ಪ್ರದೇಶ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಜೊತೆಗೆ ಇಬ್ಬರು ಉಪ ...

Published On :
ಲಕ್ನೋ: ಉತ್ತರ ಪ್ರದೇಶ ವಿಧಾನ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರ ಜೊತೆಗೆ ಇಬ್ಬರು ಉಪ ಮುಖ್ಯಮಂತ್ರಿಗಳು ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉತ್ತರ ಪ್ರದೇಶ ವಿಧಾನ ಪರಿಷತ್ ನಲ್ಲಿ ಖಾಲಿಯಿದ್ದ 5 ಸೀಟುಗಳಿಗಾಗಿ ನಡೆದ ಉಪ ಚುನಾವಣೆಯಲ್ಲಿ ಯಾರೊಬ್ಬರು ನಾಮಪತ್ರ ಸಲ್ಲಿಸದ ಕಾರಣ ಯೋಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಯೋಗಿ ಆದಿತ್ಯನಾಥ್, ಉಪ ಮುಖ್ಯಮಂತ್ರಿಗಳಾದ ಕೇಶವ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮ ಮತ್ತು ಸಚಿವರುಗಳಾದ ಸ್ವತಂತ್ರದೇವ್ ಸಿಂಗ್, ಉಪ ಚುನಾವಣೆಗಾಗಿ ಮಂಗಳವಾರ ನಾಮಪುತ್ರ ಸಲ್ಲಿಸಿದ್ದರು.
ಈ ನಾಲ್ವರು ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನ ಸಭೆ ಪ್ರಧಾನ ಕಾರ್ಯದರ್ಶಿ ಪ್ರದೀಪ್ ದುಬೆ ಘೋಷಿಸಿದ್ದಾರೆ.
ಪರಿಷತ್ ನ ಐದು ಸ್ಥಾನಗಳಿಗೆ ವಿರೋಧ ಪಕ್ಷಗಳು ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ, ಸಮಾಜವಾದಿ ಪಕ್ಷದ ಯಶ್ವಂತ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಯೋಗಿ ಆದಿತ್ಯನಾಥ್ ನಾಮಪತ್ರ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿಧಾನ ಪರಿಷತ್legislative councilYogi Adityanathಯೋಗಿ ಆದಿತ್ಯನಾಥ್ಅವಿರೋಧ ಆಯ್ಕೆಉಪ ಚುನಾವಣೆelected unopposedBypolls
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


