ದೇಶ

ಭಾರತಕ್ಕೆ ಬರುವುದಕ್ಕೂ ಮುನ್ನ ನಿಮ್ಮ ದೇಶದಲ್ಲಿಯೇ ಗೋಮಾಂಸ ತಿಂದು ಬನ್ನಿ: ಪ್ರವಾಸೋದ್ಯಮ ನೂತನ ಸಚಿವ

ಭಾರತಕ್ಕೆ ಬರುವುದಕ್ಕೂ ಮುನ್ನ ನಿಮ್ಮ ನಿಮ್ಮ ದೇಶಗಳಲ್ಲಿಯೇ ಗೋಮಾಂಸ ತಿಂದು ಬನ್ನಿ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ನೂತನ...

ಭಾರತಕ್ಕೆ ಬರುವುದಕ್ಕೂ ಮುನ್ನ ನಿಮ್ಮ ದೇಶದಲ್ಲಿಯೇ ಗೋಮಾಂಸ ತಿಂದು ಬನ್ನಿ: ಪ್ರವಾಸೋದ್ಯಮ ನೂತನ ಸಚಿವ
ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ನೂತನ ಸಚಿವ ಕೆ.ಜೆ ಅಲ್ಫಾನ್ಸ್
Published On :
ನವದೆಹಲಿ: ಭಾರತಕ್ಕೆ ಬರುವುದಕ್ಕೂ ಮುನ್ನ ನಿಮ್ಮ ನಿಮ್ಮ ದೇಶಗಳಲ್ಲಿಯೇ ಗೋಮಾಂಸ ತಿಂದು ಬನ್ನಿ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ನೂತನ ಸಚಿವ ಕೆ.ಜೆ. ಅಲ್ಫಾನ್ಸ್ ಅವರು ಶುಕ್ರವಾರ ಹೇಳಿದ್ದಾರೆ.
ಭುವನೇಶ್ವರದಲ್ಲಿ ಇಂಡಿಯನ್ ಅಸೋಸಿಯೇಶನ್ ಆಫ್ ಟೂರ್ ಆಪರೇಟರ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತದ ಕೆಲ ರಾಜ್ಯಗಳಲ್ಲಿ ಗೋಹತ್ಯೆ ಹಾಗೂ ಗೋಮಾಂಸ ಸೇವನೆಯನ್ನು ನಿಷೇಧ ಮಾಡಿರುವ ಹಿನ್ನಲೆಯಲ್ಲಿ ಭಾರತಕ್ಕೆ ಬರುವ ವಿದೇಶಿಗರಿಗೆ ನೀಡುವ ಆತಿಥ್ಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತಕ್ಕೆ ಬರುವ ವಿದೇಶಿಯರು ಭಾರತಕ್ಕೆ ಬರುವುದಕ್ಕೂ ಮುನ್ನ ಅವರ ದೇಶದಲ್ಲಿಯೇ ಗೋಮಾಂಸ ತಿಂದು ನಂತರ ಭಾರತಕ್ಕೆ ಬರಲಿ ಎಂದು ಹೇಳಿದ್ದಾರೆ.
ಭಾರತ ಅತ್ಯಂತ ಹಳೆಯ ನಾಗರೀಕತೆಯನ್ನು ಹೊಂದಿರುವ ದೇಶವಾಗಿದೆ. ಇಡೀ ವಿಶ್ವವೇ ಇಂದು ಭಾರತಕ್ಕೆ ಬಂದು ಭಾರತವನ್ನು ನೋಡುತ್ತಿದೆ. ನಮ್ಮ ಇತಿಹಾಸ ಹಾಗೂ ನಮ್ಮ ದೇಶವನ್ನು ನಾವು ಪ್ರೀತಿಸಬೇಕು. ಈ ಬಗ್ಗೆ ವಿದೇಶಿಯರಿಗೂ ಹೇಳಬೇಕು. ನಮ್ಮದು ಅತ್ಯಂತ ಸುಂದರವಾದ ದೇಶ ಎಂದು ತಿಳಿಸಬೇಕು ಎಂದು ತಿಳಿಸಿದ್ದಾರೆ. 
ಸೆ.3 ರಂದು ನಡೆದ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರವಾಸೋದ್ಯಮ ಸಚಿವರಾಗಿ ಅಲ್ಫಾನ್ಸ್ ಅವರು ಆಯ್ಕೆಯಾಗಿದ್ದರು. ಬಳಿಕ ಪ್ರತಿಕ್ರಿಯೆ ನೀಡಿದ್ದ ಅವರು, ಭಾರತೀಯ ಪ್ರವಾಸೋದ್ಯಮ ಕ್ಷೇತ್ರವನ್ನು ಬಲಪಡಿಸುವುದಕ್ಕೆ ಹಲವು ಕ್ರಿಯಾಶೀಲ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರವಾಸೋದ್ಯಮ ಕ್ಷೇತ್ರದ ಪ್ರಗತಿಗೆ ಸಂಬಂಧಿಸಿದಂತೆ ಜನರೂ ಸರ್ಕಾರಕ್ಕೆ ಸಲಹೆ ಹಾಗೂ ಸೂಚನೆಗಳನ್ನು ನೀಡಬಹುದು ಎಂದು ಹೇಳಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.