ಗುರುಗ್ರಾಮ: ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 2ನೇ ತರಗತಿ ವಿದ್ಯಾರ್ಥಿ ಶವ ಪತ್ತೆ
ಗುರುಗ್ರಾಮದ ಸೋಹ್ನಾ ಪ್ರದೇಶದಲ್ಲಿರುವ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 2ನೇ ತರಗತಿಯ....

Published On :
ಗುರುಗ್ರಾಮ: ಗುರುಗ್ರಾಮದ ಸೋಹ್ನಾ ಪ್ರದೇಶದಲ್ಲಿರುವ ರಿಯಾನ್ ಇಂಟರ್ ನ್ಯಾಷನಲ್ ಶಾಲೆಯ ಶೌಚಾಲಯದಲ್ಲಿ 2ನೇ ತರಗತಿಯ ವಿದ್ಯಾರ್ಥಿಯ ಶವ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ 8.30ರ ಸುಮಾರಿಗೆ ಪ್ರಧುಮಾನ್ ಥಾಕೂರ್(7 ವರ್ಷ) ಎಂಬ ವಿದ್ಯಾರ್ಥಿ ಶಾಲೆಯ ಶೌಚಾಲಯದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿದ ಇತರೆ ವಿದ್ಯಾರ್ಥಿಗಳು ಕೂಡಲೇ ತಮ್ಮ ಶಿಕ್ಷಕರಿಗೆ ಮತ್ತು ಶಾಲಾ ಆಡಳಿತ ಮಂಡಳಿಗೆ ತಿಳಿಸಿದ್ದಾರೆ. ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ಹೇಳಿದ್ದಾರೆ.
ಪೊಲೀಸರ ತಂಡ ಮತ್ತು ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಧಾವಿಸಿದ್ದು, ಸ್ಥಳದಲ್ಲಿದ್ದ ಒಂದು ಚಾಕುವನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಗುರುಗ್ರಾಮ ಪೊಲೀಸ್ ಪಿಆರ್ಒ ರವೀಂದ್ರ ಕುಮಾರ್ ಅವರು ತಿಳಿಸಿದ್ದಾರೆ.
ಎಲ್ಲಾ ಕೋನಗಳಿಂದಲೂ ನಾವು ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಪೊಲೀಸರು ಶಾಲಾ ಆವರಣದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಥಾಕೂರ್ ಕ್ಲಾಸ್ ಮೆಟ್ ಗಳನ್ನು ಮತ್ತು ಕೆಲ ಶಿಕ್ಷಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gurgaonಗುರುಗ್ರಾಮclass 2 studentRyan International School2ನೇ ತರಗತಿ ವಿದ್ಯಾರ್ಥಿರಿಯಾನ್ ಇಂಟರ್ ನ್ಯಾಷನಲ್ ಶಾಲೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


