ತಮಿಳುನಾಡು ಸ್ಪೀಕರ್ ರಿಂದ ಎಐಎಡಿಎಂಕೆ 19 ಬಂಡಾಯ ಶಾಸಕರಿಗೆ ನೋಟಿಸ್
ಉಚ್ಚಾಟಿತ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್ ಬೆಂಬಲಕ್ಕೆ ನಿಂತಿರುವ 19 ಬಂಡಾಯ ಶಾಸಕರಿಗೆ ತಮಿಳುನಾಡು ವಿಧಾನಸಭೆ...

Published On :
ಚೆನ್ನೈ: ಉಚ್ಚಾಟಿತ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್ ಬೆಂಬಲಕ್ಕೆ ನಿಂತಿರುವ 19 ಬಂಡಾಯ ಶಾಸಕರಿಗೆ ತಮಿಳುನಾಡು ವಿಧಾನಸಭೆ ಸ್ಪೀಕರ್ ಪಿ ಧನಪಾಲ್ ಅವರು ಶುಕ್ರವಾರ ಶೋಕಾಸ್ ನೋಟಿಸ್ ನೀಡಿದ್ದು, ಸೆಪ್ಟೆಂಬರ್ 14ರಂದು ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.
ದಿನಕರನ್ ಅವರೊಂದಿಗೆ ಗುರುತಿಸಿಕೊಂಡಿರುವ ಶಾಸಕರಿಗೆ ಆಗಸ್ಟ್ 24ರಂದು ನೋಟಿಸ್ ನೀಡಿದ್ದ ಸ್ಪೀಕರ್, ಪಕ್ಷ ವಿರೋಧಿ ಕಾಯ್ದೆಯಡಿ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು? ಎಂದು ಪ್ರಶ್ನಿಸಿದ್ದರು.
ಬಂಡಾಯ ಶಾಸಕರು ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಸರ್ಕಾರದ ವಿರುದ್ಧ ರಾಜ್ಯಪಾಲ ಸಿಎಚ್ ವಿದ್ಯಾಸಾಗರ್ ರಾವ್ ಅವರಿಗೆ ಮನವಿ ಪತ್ರ ನೀಡಿದ ನಂತರ 19 ಶಾಸಕರ ಸದಸ್ಯತ್ವವನ್ನು ಅನರ್ಹಗೊಳಿಸುವಂತೆ ಕೋರಿ ಸರ್ಕಾರದ ಮುಖ್ಯ ಸಚೇತಕ ಎಸ್ ರಾಜೇಂದ್ರನ್ ಅವರು ಸ್ಪೀಕರ್ ಗೆ ಪತ್ರ ಬರೆದ ನಂತರ ಧನಪಾಲ್ ಅವರು ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


