ಹೈದರಾಬಾದ್: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಚಿನ್ನ ವಶ, ವ್ಯಕ್ತಿ ಬಂಧನ
ಸುಂಕ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಹೈದರಾಬಾದಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ....

Published On :
ಹೈದರಾಬಾದ್: ಸುಂಕ ಇಲಾಖೆ ಅಧಿಕಾರಿಗಳು ಇಂದು ಬೆಳಗ್ಗೆ ಹೈದರಾಬಾದಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮೂಲದ 8 ಚಿನ್ನದ ಬಿಸ್ಕತ್ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಅವು ಸುಮಾರು 932 ಗ್ರಾಂ ತೂಕವನ್ನು ಹೊಂದಿದ್ದು 29,19,956 ಲಕ್ಷ ರೂಪಾಯಿ ಬೆಲೆಬಾಳುವದ್ದಾಗಿತ್ತು. ದುಬೈಯಿಂದ ಬಂದ ಪ್ರಯಾಣಿಕನಿಂದ ಈ ಚಿನ್ನವನ್ನು ವಶಪಡಿಸಿಕೊಳ್ಳಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನ ಜಾಗ್ರತ ಘಟಕದ ಗುಪ್ತಚರ ಇಲಾಖೆಯ ಸುಂಕ ಅಧಿಕಾರಿಗಳಿಂದ ಇಂದು ಬೆಳಗ್ಗೆ 7 ಗಂಟೆ 50 ನಿಮಿಷ ಸುಮಾರಿಗೆ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ಪ್ರಯಾಣಿಕ ಚಿನ್ನದ ತುಂಡನ್ನು ಪ್ಯಾಂಟಿನ ಕಿಸೆ ಮತ್ತು ಸಾಕ್ಸ್ ನಲ್ಲಿ ತುಂಬಿಸಿಟ್ಟುಕೊಂಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದು, ಮುಂದಿನ ವಿಚಾರಣೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
goldಚಿನ್ನCustoms officialHyderabad Rajiv Gandhi International airportಸುಂಕ ಅಧಿಕಾರಿಗಳುಹೈದರಾಬಾದ್ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


