ಗೃಹ ಸಚಿವ ರಾಜನಾಥ್ ಸಭೆ ನಡೆಸಬೇಕಿದ್ದ ಸ್ಥಳದಲ್ಲೇ ಉಗ್ರರ ದಾಳಿ, ಪೊಲೀಸ್ ಪೇದೆ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪೊಲೀಸರನ್ನು ಗುರಿಯಾಗಿರಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಓರ್ವ ಪೊಲೀಸ್...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪೊಲೀಸರನ್ನು ಗುರಿಯಾಗಿರಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದಾರೆ.
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನಾಲ್ಕು ದಿನಗಳ ಭೇಟಿಗಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ಆಗಮಿಸಿದ್ದು ಅವರು ನಾಳೆ ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮ ಜರುಗುವ 500 ಮೀಟರ್ ದೂರದಲ್ಲಿ ಈ ಗುಂಡಿನ ದಾಳಿ ನಡೆದಿದ್ದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಪೇದೆ ಹುತಾತ್ಮರಾಗಿದ್ದು ಮತ್ತಿಬ್ಬರಿಗೆ ಗಾಯವಾಗಿದೆ. ಉಗ್ರರ ಗುಂಡಿನ ದಾಳಿ ಬಳಿಕ ಸ್ಥಳದಲ್ಲಿ ಹೆಚ್ಚಿನ ಭದ್ರತೆ ಒದಗಿಸಿದ್ದು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜನಾಥ್ ಸಿಂಗ್Policeಪೊಲೀಸ್ಜಮ್ಮು ಮತ್ತು ಕಾಶ್ಮೀರJammu and KashmirRajnath Singhಉಗ್ರರ ದಾಳಿterrorists Attack
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


