ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್; ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳುಸಿದೆ ಎಂದು ಶನಿವಾರ ತಿಳಿದುಬಂದಿದೆ...

Published On :
ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನಲ್ಲಿ ಭಾರತೀಯ ಸೇನಾ ಪಡೆ ಕಾರ್ಯಾಚರಣೆ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳುಸಿದೆ ಎಂದು ಶನಿವಾರ ತಿಳಿದುಬಂದಿದೆ.
ಸೊಪೋರ್ ಜಿಲ್ಲೆಯ ರೆಬನ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಭಾರತೀಯ ಸೇನಾಪಡೆ ಇಂದು ಬೆಳಿಗ್ಗೆಯಿಂದಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿತ್ತು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ವೇಳೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡಿದ್ದು, ಉಗ್ರನೊಬ್ಬನನ್ನು ಹತ್ಯೆ ಮಾಡಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


