ಗೌರಿ ಲಂಕೇಶ್ ಹತ್ಯೆಗೆ ತೀವ್ರ ಖಂಡನೆ: 'ಇದು ನನ್ನ ಭಾರತವಲ್ಲ'ವೆಂದ ಎ.ಆರ್. ರೆಹಮಾನ್
ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆಗೆ ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಈ ರೀತಿಯ ಘಟನೆಗಳು ದೇಶದಲ್ಲಿ ಮುಂದವರೆದರೆ...

Published On :
ಮುಂಬೈ: ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆಗೆ ಸಂಗೀತ ಮಾಂತ್ರಿಕ ಎ.ಆರ್. ರೆಹಮಾನ್ ಅವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಈ ರೀತಿಯ ಘಟನೆಗಳು ದೇಶದಲ್ಲಿ ಮುಂದವರೆದರೆ, ಇದು ನನ್ನ ಭಾರತವಲ್ಲ ಎಂದು ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಎ.ಆರ್. ರೆಹಮಾನ್ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ದುಃಖ ಹಾಗೂ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಗೌರಿಯವರ ಹತ್ಯೆ ವಿಚಾರ ನನಗೆ ಅತೀವ ದುಃಖವನ್ನು ತಂದಿದೆ. ಈ ತರಹದ ಘಟನೆಗಳು ಮತ್ತೆ ನಮ್ಮ ದೇಶದಲ್ಲಿ ಆಗುವುದಿಲ್ಲ ಎಂದು ನಾನು ನಂಬಿದ್ದೇನೆ. ಇಂತಹ ಘಟನೆಗಳು ಭಾರತದಲ್ಲಿ ಮತ್ತೆ ಆದರೆ, ಅದು ನನ್ನ ಭಾರತವಲ್ಲ. ನನ್ನ ಭಾರತ ಪ್ರಗತಿಪರ ಮತ್ತು ಒಳ್ಳೆಯ ದೇಶವಾಗಿರಬೇಕೆಂದು ಆಶಿಸುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


