ಗುರುಗ್ರಾಮ ವಿದ್ಯಾರ್ಥಿ ಹತ್ಯೆ: ಶಾಲೆ ಮಾಲೀಕರ ವಿರುದ್ಧ ಪ್ರಕರಣ ದಾಖಲು!
ರ‍್ಯಾನ್ ಇಂಟರ್'ನ್ಯಾಷನಲ್ ಶಾಲಾ ಬಾಲಕನ ಹತ್ಯೆ ಪ್ರಕರಣ ಸಂಬಂಧ ಶಾಲೆಯ ಮಾಲೀಕರ ವಿರುದ್ಧ ಮಕ್ಕಳ ರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
Published On :
ನವದೆಹಲಿ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಗುರುಗ್ರಾಮದ ರ‍್ಯಾನ್ ಇಂಟರ್'ನ್ಯಾಷನಲ್ ಶಾಲಾ ಬಾಲಕನ ಹತ್ಯೆ ಪ್ರಕರಣ ಸಂಬಂಧ ಶಾಲೆಯ ಮಾಲೀಕರ ವಿರುದ್ಧ ಮಕ್ಕಳ ರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
ವಿದ್ಯಾರ್ಥಿ ಹತ್ಯೆಯನ್ನು ಖಂಡಿಸಿ ಗುರುಗ್ರಾಮದಲ್ಲಿ ವಿದ್ಯಾರ್ಥಿಗಳ ಪೋಷಕರು ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆಯೇ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ರಾಮ್ ಬಿಲಾಸ್ ಶರ್ಮಾ ಅವರು, "ಬಾಲಕನ ಹತ್ಯೆ ಪ್ರಕರಣದಲ್ಲಿ ಶಾಲೆಯ ಆಡಳಿತ ಮಂಡಳಿಯ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯವನ್ನು ನಾವು ಒಪ್ಪಿಕೊಳ್ಳುತ್ತೇವೆ. ಶಾಲೆಗೆ ಬಂದ ಮಕ್ಕಳ ರಕ್ಷಣೆ ಶಾಲಾ ಸಿಬ್ಬಂದಿಗಳದ್ದೇ ಆಗಿರುತ್ತದೆ. 1200 ಮಕ್ಕಳಿರುವ ಶಾಲೆಯಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ ಕಲ್ಪಿಸದಿರುವುದು ಎದ್ದುಕಾಣುತ್ತಿದೆ. ಹೀಗಾಗಿ ಪೊಲೀಸರಿಗೆ ಶಾಲೆಯ ಮಾಲೀಕರ ವಿರುದ್ಧ ಮಕ್ಕಳ ರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅದರಂತೆ ರ‍್ಯಾನ್ ಇಂಟರ್'ನ್ಯಾಷನಲ್ ಶಾಲೆಯ ಮಾಲೀಕರಾದ ಆಲ್ಬರ್ಟ್ ಪಿಂಟೋ ಮತ್ತು ಅವರ ಸಿಬ್ಬಂದಿಗಳ ವಿರುದ್ಧ ಮಕ್ಕಳ ರಕ್ಷಣಾ ಕಾಯ್ದೆ 2015ರ ಸೆಕ್ಷನ್ 75ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಂತೆಯೇ ಇನ್ನು 7 ದಿನಗಳಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸುವಂತೆ ಪೋಷಕರ ಆಗ್ರಹ
ಇನ್ನು ಬಾಲಕನ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪ್ರತಿಭಟನಾ ನಿರತ ಪೋಷಕರು ಆಗ್ರಹಿಸಿದ್ದಾರೆ. ಈಗಾಗಲೇ ಗುರುಗ್ರಾಮದಲ್ಲಿ ಬಾಲಕನ ಹತ್ಯೆ ಖಂಡಿಸಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದ್ದು, ದೇಶಾದ್ಯಂತ ಕೃತ್ಯವನ್ನು ಖಂಡಿಸಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸುವಂತೆ ಪೋಷಕರ ಆಗ್ರಹ
ಇನ್ನು ಬಾಲಕನ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಪ್ರತಿಭಟನಾ ನಿರತ ಪೋಷಕರು ಆಗ್ರಹಿಸಿದ್ದಾರೆ. ಈಗಾಗಲೇ ಗುರುಗ್ರಾಮದಲ್ಲಿ ಬಾಲಕನ ಹತ್ಯೆ ಖಂಡಿಸಿ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿದ್ದು, ದೇಶಾದ್ಯಂತ ಕೃತ್ಯವನ್ನು ಖಂಡಿಸಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiJuvenile Justice Actಗುರುಗ್ರಾಮRyan International SchoolGurugram Child murderರ‍್ಯಾನ್ ಇಂಟರ್\'ನ್ಯಾಷನಲ್ ಶಾಲೆಮಕ್ಕಳ ರಕ್ಷಣಾ ಕಾಯ್ದೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?

