ವೃತ್ತಿ ಬದುಕಿಗೆ ವಿದಾಯ ಹೇಳಿದ ಖ್ಯಾತ ವಕೀಲ ರಾಮ್ ಜೇಠ್ಮಲಾನಿ
ದೇಶದ ಹಿರಿಯ ವಕೀಲರಾದ ರಾಮ್ ಜೇಠ್ಮಲಾನಿ ನಿವೃತ್ತಿ ಘೋಷಿಸಿದ್ದಾರೆ.

Published On :
ನವದೆಹಲಿ: ದೇಶದ ಹಿರಿಯ ವಕೀಲರಾದ ರಾಮ್ ಜೇಠ್ಮಲಾನಿ ನಿವೃತ್ತಿ ಘೋಷಿಸಿದ್ದಾರೆ.
ಸುಮಾರು ಏಳು ದಶಕಗಳ ಕಾಲ ವಿವಿಧ ಹಂತರ ನ್ಯಾಯಾಲಯಗಳಲ್ಲಿ ಸಮರ್ಥವಾಗಿ ವಾದ ಮಂಡಿಸುತ್ತಿದ್ದ ಜೇಠ್ಮಲಾನಿ ತಮ್ಮ ಸುದೀರ್ಘ ವೃತ್ತಿ ಬದುಕಿಗೆ ಕೊನೆಯ ಷರಾ ಹಾಕಿದ್ದಾರೆ
ನಿವೃತ್ತಿ ಘೋಷಣೆ ಬಳಿಕ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ಹರಿಹಾಯ್ದ ಜೇಠ್ಮಲಾನಿ, "ಯುಪಿಎ ಸರ್ಕಾರದ ಕ್ಕಿಂತಲೂ ಎನ್ ಡಿಎ ಸರ್ಕಾರದ ವೈಫಲ್ಯ ದೊಡ್ಡದು" ಎಂದು ಆರೋಪಿಸಿದರು.
"ಭ್ರಷ್ಟಾಚಾರದ ವಿರುದ್ಧ ನನ್ನ ಹೋರಾಟ ಮುಂದುವರೆಯಲಿದೆ. ಹಿಂದಿನ ಹಾಗೂ ಈಗಿನ ಸರ್ಕಾರಗಳು ದೇಶದ ಪರಿಸ್ಥಿತಿಯನ್ನು ಹದಗೆಡಿಸಲು ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡಿವೆ" ಎಂದು ವಿಷಾದ ವ್ಯಕ್ತಪಡಿಸಿದರು.
ಬಾರ್ ಕೌನ್ಸಿಲ್ ಆಫ್ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಸನ್ಮಾನಿಸಿ ಮಾತನಾಡಿದ ರಾಮ್ ಜೇಠ್ಮಲಾನಿ "ನಾನು ನನ್ನ ವೃತ್ತಿಯಿಂದ ಮಾತ್ರವೇ ನಿವೃತ್ತನಾಗುತ್ತಿದ್ದೇನೆ. ನಾನು ಜೀವಂತ ಇರುವ ತನಕ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಯಲಿದೆ. ಭಾರತ ಉತ್ತಮ ಸ್ಥಿತಿ ಹೊಂದಲು ಶ್ರಮಿಸುತ್ತೇನೆ" ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Ram JethmalaniSenior lawyer Ram JethmalaniJethmalani retirementರಾಮ್ ಜೇಠ್ಮಲಾನಿವಕೀಲ ರಾಮ್ ಜೇಠ್ಮಲಾನಿಜೇಠ್ಮಲಾನಿ ನಿವೃತ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


