ನೀಟ್ ವಿರೋಧಿಸಿ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಪೋಷಕರಿಗೆ ಸಾಂತ್ವನ ಹೇಳಿ ನಟ ವಿಜಯ್
ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) ವಿರುದ್ಧ ಕಾನೂನು ಹೋರಾಟ ನಡೆಸಿ ಆತ್ಮಹತ್ಯೆಗೆ ಶರಣಾಗಿರುವ ದಲಿತ ವಿದ್ಯಾರ್ಥಿನಿ ಅನಿತಾ(18) ಅವರ ಮನೆಗೆ ತಮಿಳು ನಟ...

Published On :
ಚೆನ್ನೈ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) ವಿರುದ್ಧ ಕಾನೂನು ಹೋರಾಟ ನಡೆಸಿ ಆತ್ಮಹತ್ಯೆಗೆ ಶರಣಾಗಿರುವ ದಲಿತ ವಿದ್ಯಾರ್ಥಿನಿ ಅನಿತಾ(18) ಅವರ ಮನೆಗೆ ತಮಿಳು ನಟ ವಿಜಯ್ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ಮೃತ ಅನಿತಾ ಮನೆಗೆ ವಿಜಯ್ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಹಿಂದೆ ಕಾಲಿವುಡ್ ನಟರಾದ ಕಮಲ್ ಹಾಸನ್ ಮತ್ತು ರಜನಿಕಾಂತ್ ಅನಿತಾ ಸಾವು ಕುರಿತಂತೆ ಸಂತಾಪ ಸೂಚಿಸಿದ್ದರು. ಈ ವೇಳೆ ಅನಿತಾ ಸಾವನ್ನು ಖಂಡಿಸಿದ್ದ ಕಮಲ್ ಹಾಸನ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ವಿಜಯ್ ಜಲ್ಲಿಕಟ್ಟು ಪ್ರತಿಭಟನೆಗೆ ಬೆಂಬಲ ಘೋಷಿಸಿದ್ದನ್ನು ಬಿಟ್ಟರೇ ಮತ್ಯಾವುದೇ ರಾಜಕೀಯ ವಿಷಯಗಳ ಮೇಲೆ ಪ್ರತಿಕ್ರಿಯಿಸುತ್ತಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಅನಿತಾ ಸಾವು ಕುರಿತಂತೆ ಆಕೆಯ ಮನೆಗೆ ತೆರಳಿ ಪೋಷಕರಿಗೆ ಸಾಂತ್ವನ ಹೇಳಿರುವುದು ಅವರ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿವೆ.
ದಲಿತ ಕುಟುಂಬಕ್ಕೆ ಸೇರಿರುವ ಅನಿತಾ ತಂದೆ ದಿನಗೂಲಿ ಕಾರ್ಮಿಕರು. ವೈದ್ಯೆಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದ ಅನಿತಾ ಪಿಯು ದ್ವಿತೀಯ ಪರೀಕ್ಷೆಯಲ್ಲಿ 1,200ಕ್ಕೆ 1,176 ಅಂಕಗಳನ್ನು ಗಳಿಸಿದ್ದರು. ಆದರೆ, ‘ನೀಟ್’ನಲ್ಲಿ ಅನಿತಾ ಕೇವಲ 86 ಅಂಕಗಳನ್ನು ಮಾತ್ರ ಗಳಿಸಿದ್ದರಿಂದ ವೈದ್ಯಕೀಯ ಸೀಟು ದೊರೆಯಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


