ಯುದ್ಧ ಸಾಮಾಗ್ರಿ ಕೊರತೆ ಕುರಿತ ಸಿಎಜಿ ವರದಿ ತಪ್ಪು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್
ಯುದ್ಧ ಆರಂಭವಾದರೆ 20 ದಿನದಲ್ಲಿ ಭಾರತದ ಶಸ್ತ್ರಾಸ್ತ್ರ ಖಾಲಿಯಾಗುತ್ತದೆ ಎಂಬ ಮಹಾಲೇಖಪಾಲ (ಸಿಎಜಿ) ವರದಿಯನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ತಳ್ಳಿಹಾಕಿದ್ದಾರೆ...

Published On :
ಬಾರ್ಮರ್: ಯುದ್ಧ ಆರಂಭವಾದರೆ 20 ದಿನದಲ್ಲಿ ಭಾರತದ ಶಸ್ತ್ರಾಸ್ತ್ರ ಖಾಲಿಯಾಗುತ್ತದೆ ಎಂಬ ಮಹಾಲೇಖಪಾಲ (ಸಿಎಜಿ) ವರದಿಯನ್ನು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ತಳ್ಳಿಹಾಕಿದ್ದಾರೆ.
ಸಿಎಜಿ ವರದಿ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಯುದ್ಧ ಸಾಮಾಗ್ರಿಗಳ ಕುರಿತಂತೆ ಸಿಎಜಿ ವರದಿ ತಪ್ಪು. ಈ ವಿಚಾರದ ಬಗ್ಗೆ ಚರ್ಚೆ ನಡೆಸುವುದು ಅನಗತ್ಯ ಎಂದು ಹೇಳಿದ್ದಾರೆ.
ರಕ್ಷಣಾ ಸಚಿವೆಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಹಿರಿಯ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಚರ್ಚೆ ನಡೆಸಿದ್ದೇನೆ. ಶಸ್ತ್ರಾಸ್ತ್ರಗಳ ಖರೀದಿ ಸುದೀರ್ಘ ಪ್ರಕ್ರಿಯೆಯಾಗಿದೆ ಎಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಭಾರತೀಯ ಸೇನೆಯ ಬಳಿಯಿರುವ ಶಸ್ತ್ರಾಸ್ತ್ರಗಳ ಬಗ್ಗೆ ಲೆಕ್ಕ ಪರಿಶೋಧನಾ ಸಮತಿ (ಸಿಎಜಿ) ಕೇಂದ್ರ ಸರ್ಕಾರಕ್ಕೆ ವರದಿಯೊಂದನ್ನು ಸಲ್ಲಿಸಿತ್ತು. ವರದಿಯಲ್ಲಿ ಯುದ್ಧ ನಡೆದರೆ ಭಾರತೀಯ ಸೇನೆಗೆ 152 ವಿಧದ ಶಸ್ತ್ರಾಸ್ತ್ರಗಳು ತುರ್ತಾಗಿ ಬೇಕಾಗುತ್ತದೆ. ಆದರೆ ಈ ಪೈಕಿ 61 ವಿಧದ ಶಸ್ತ್ರಾಸ್ತ್ರಗಳು ಸತತ 20 ದಿನ ಯುದ್ಧ ನಡೆದರೆ ಖಾಲಿಯಾಗುತ್ತವೆ. 31 ವಿಧದ ಶಸ್ತ್ರಾಸ್ತ್ರಗಳ ದಾಸ್ತಾನು ತೃಪ್ತಿದಾಯಕವಾಗಿದೆಯಾದರೂ ಉಳಿದ 60 ವಿಧದ ಶಸ್ತ್ರಾಸ್ತ್ರಗಳ ಪ್ರಮಾಣ ಕಡಿಮೆ ಪ್ರಮಾಣದಲ್ಲಿವೆ ಎಂದು ವರದಿಯಲ್ಲಿ ತಿಳಿಸಿತ್ತು.
ಯಾವುದೇ ಸಂದರ್ಭದಲ್ಲಿ ಯುದ್ಧ ಘೋಷಣೆಯಾದರೆ ಕನಿಷ್ಠ 40 ದಿನಗಳಿಗಾಗುವಷ್ಟು ಶಸ್ತ್ರಾಸ್ತ್ರಗಳ ಸಂಗ್ರಹ ಆ ದೇಶದಲ್ಲಿ ಇರಬೇಕು ಎಂಬ ನಿಯಮವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Defence MinisterCAGಸಿಎಜಿNirmala Sitharamanನಿರ್ಮಲಾ ಸೀತಾರಾಮನ್ಯುದ್ಧ ಸಾಮಾಗ್ರಿAmmunition Shortageರಕ್ಷಣಾ ಸಚಿವೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


