ದೇಶ

ಗುರುಗ್ರಾಮ ವಿದ್ಯಾರ್ಥಿ ಕೊಲೆ ಪ್ರಕರಣ: ಕೇಂದ್ರ, ಹರಿಯಾಣ, ಸಿಬಿಎಸ್‌ಇಗೆ ಸುಪ್ರೀಂ ನೋಟಿಸ್‌

ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ...

ಗುರುಗ್ರಾಮ ವಿದ್ಯಾರ್ಥಿ ಕೊಲೆ ಪ್ರಕರಣ: ಕೇಂದ್ರ, ಹರಿಯಾಣ, ಸಿಬಿಎಸ್‌ಇಗೆ ಸುಪ್ರೀಂ ನೋಟಿಸ್‌
ಸುಪ್ರೀಂ ಕೋರ್ಟ್
Published On :
ನವದೆಹಲಿ: ಗುರುಗ್ರಾಮದ ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ 2ನೇ ತರಗತಿಯ ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ, ಹರಿಯಾಣ ಸರ್ಕಾರ ಹಾಗೂ ಸಿಬಿಎಸ್ ಇಗೆ ನೋಟಿಸ್ ಜಾರಿ ಮಾಡಿದೆ.
ಕೊಲೆಗೀಡಾದ ಬಾಲಕನ ತಂದೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಈ ಕುರಿತು ಮೂರು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ, ಹರಿಯಾಣ ಸರ್ಕಾರ ಹಾಗೂ ಸಿಬಿಐಎಸ್ ಇಗೆ ನೋಟಿಸ್‌ ನೀಡಿದೆ.
ಪ್ರಕರಣ ಸಂಬಂಧ ವಿವರಣೆ ನೀಡುವಂತೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಗೂ(ಸಿಬಿಎಸ್ಇ) ಸೂಚಿಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ಪೀಠ, ಮಕ್ಕಳ ಸುರಕ್ಷತೆ ಮತ್ತು ಭದ್ರತೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿಯ ಜವಾಬ್ದಾರಿಗಳನ್ನು ಸರಿಪಡಿಸುವ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುವಂತೆ ಆದೇಶಿಸಿದೆ. ಅಲ್ಲದೆ ಬಾಲಕನ ತಂದೆ ಸಲ್ಲಿಸಿದ್ದ ಈ ಅರ್ಜಿ ಕೇವಲ ಈ ಒಂದು ಶಾಲೆಗೆ ಸಂಬಂಧಿಸಿದ್ದಲ್ಲ, ದೇಶಾದ್ಯಂತ ಇರುವ ಎಲ್ಲಾ ಶಾಲೆಗಳಿಗೆ ಅನ್ವಯವಾಗುವಂತಹದ್ದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐಯಿಂದ ಮುಕ್ತ ಮತ್ತು ನ್ಯಾಯೋಚಿತ ತನಿಖೆ ನಡೆಸಬೇಕು ಎಂದು ಕೋರಿ ವಿದ್ಯಾರ್ಥಿಯ ತಂದೆ ಬರುಣ್ ಚಂದ್ರ ಠಾಕೂರ್ ಅವರು ವಕೀಲ ಸುಶೀಲ್ ಟೆಕ್ವಾಲ್ ಅವರ ಮೂಲಕ ಮನವಿ ಸಲ್ಲಿಸಿದ್ದರು.
ಸೆಪ್ಟೆಂಬರ್ 8ರಂದು 7 ವರ್ಷ ವಿದ್ಯಾರ್ಥಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು, ವಿದ್ಯಾರ್ಥಿಯ ಶವ ಶಾಲಾ ಶೌಚಾಲಯದಲ್ಲಿ ಪತ್ತೆಯಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.