ಸೆ.13-14 ರಂದು ಭಾರತಕ್ಕೆ ಭೇಟಿ ನೀಡಲಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ
ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಸೆ.13-14 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಂಜೋ ಅಬೆ, ಗುಜರಾತ್ ನಲ್ಲಿ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಸೆ.13-14 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಂಜೋ ಅಬೆ, ಗುಜರಾತ್ ನಲ್ಲಿ ನಡೆಯಲಿರುವ ಭಾರತ ಜಪಾನ್ ನ 12 ನೇ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.
ಗುಜರಾತ್ ನ ಗಾಂಧಿ ನಗರದಲ್ಲಿ ಭಾರತ-ಜಪಾನ್ ನ 12 ನೇ ಶೃಂಗಸಭೆ ನಡೆಯಲಿದ್ದು, ಭಾರತ-ಜಪಾನ್ ನಡುವಿನ ವಿವಿಧ ಕ್ಷೇತ್ರಗಳಲ್ಲಿನ ಸಹಕಾರದ ಪ್ರಗತಿಯನ್ನು ಇಬ್ಬರೂ ನಾಯಕರು ಪರಿಶೀಲನೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಜಪಾನ್ ಪ್ರಧಾನಿ ಭಾರತಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಜಪಾನ್ ನ ರಾಯಭಾರಿ, ಭಾರತ-ಜಪಾನ್ ನ ದ್ವಿಪಕ್ಷೀಯ ಸಂಬಂಧ ಎಂದಿಗೂ ಚೆನ್ನಾಗಿದೆ. ಭಾರತ ಜಪಾನ್ ಗೆ ಪ್ರಮುಖ ಮಿತ್ರ ರಾಷ್ಟ್ರ ಎಂದು ಬಣ್ಣಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


