ಕುಲ್ಗಾಮ್ ಎನ್'ಕೌಂಟರ್: ಹಿಜ್ಬುಲ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ, ಓರ್ವ ಬಂಧನ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ...

Published On :
ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭಾರತೀಯ ಸೇನೆ ಎನ್ ಕೌಂಟರ್ ನಡೆಸಿದ್ದು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಸೋಮವಾರ ತಿಳಿದುಬಂದಿದೆ.
ಕುಲ್ಗಾಂನ ಖುದ್ವಾನಿ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ತಿಳಿದುಬಂದ ಹಿನ್ನಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಗಿಳಿದಿತ್ತು. ಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದ್ದಂತೆಯೇ ಉಗ್ರರು ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು.
ಈ ವೇಳೆ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಸೇನಾಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಅಲ್ಲದೆ, ಓರ್ವ ಉಗ್ರನನ್ನು ಬಂಧನಕ್ಕೊಳಪಡಿಸಿದೆ. ಹತ್ಯೆಯಾದ ಉಗ್ರರನ್ನು ದಾವೂದ್ ಅಹ್ಮದ್ ಅಲಿ ಹಾಗೂ ಶೈಯಾರ್ ಅಹ್ಮದ್ ವಾನಿ ಎಂದು ಗುರ್ತಿಸಲಾಗಿದೆ. ಬಂಧನಕ್ಕೊಳಗಾಗಿರುವ ಉಗ್ರನನ್ನು ಆರೀಫ್ ಸೊಫಿ ಎಂದು ಗುರ್ತಿಸಲಾಗಿದೆ. ಕಾರ್ಯಾಚರಣೆ ವೇಳೆ ಸೇನಾಪಡೆ 1 ಎಕೆ47 ಮತ್ತು 1 ಇನ್ಸಾಫ್ ರೈಫಲ್ ನ್ನು ವಶಕ್ಕೆ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and KashmirHizbul Mujahideenಹಿಜ್ಬುಲ್ ಮುಜಾಹಿದ್ದೀನ್Kulgam Encounterಕುಲ್ಗಾಮ್ ಎನ್\'ಕೌಂಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


