ದೇಶ

ಗುರುಗಾಂವ್ ಬಾಲಕ ಹತ್ಯೆ: ಕೇಂದ್ರ ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ಮಹತ್ವದ ಬೆಳವಣಿಗೆಯಲ್ಲಿ ಗುರುಗಾಂವ್ ನ ಶಾಲಾ ಬಾಲಕನ ಹತ್ಯೆ ಪ್ರಕರಣ ಸಂಬಂಧ ಸೋಮವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಸಿಬಿಐ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ಗುರುಗಾಂವ್ ಬಾಲಕ ಹತ್ಯೆ: ಕೇಂದ್ರ ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ಸಂಗ್ರಹ ಚಿತ್ರ
Published On :
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಗುರುಗಾಂವ್ ನ ಶಾಲಾ ಬಾಲಕನ ಹತ್ಯೆ ಪ್ರಕರಣ ಸಂಬಂಧ ಸೋಮವಾರ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಸಿಬಿಐ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.
ಹತ್ಯೆಗೀಡಾದ ಬಾಲಕ ಪ್ರದ್ಯುಮ್ನನ ಪೋಷಕರು ತಮ್ಮ ಪುತ್ರನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಶಾಲಾ ವಿದ್ಯಾರ್ಥಿಗಳ ಸುರಕ್ಷತೆ ಸಂಬಂಧ ಗಮನ ಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಹಾಗೂ ಪ್ರಕರಣ ಸಂಬಂಧ ತನಿಖೆ ನಡೆಸುವ ಕುರಿತು ಪ್ರತಿಕ್ರಿಯೆ ನೀಡುವಂತೆ ಸಿಬಿಐ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.
ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿರುವ ಸುಪ್ರೀಂ ಕೋರ್ಟ್, ಶಾಲಾ ವಿದ್ಯಾರ್ಥಿಗಳ ಸುರಕ್ಷತೆ ಕುರಿತಂತೆ ಗಮನ ಹರಿಸುವಂತೆ ಹೇಳಿದೆ. ಅಂತೆಯೇ 3 ವಾರದೊಳಗೆ ಉತ್ತರಿಸುವಂತೆಯೂ ಸೂಚಿಸಿದೆ.
ಇನ್ನು ಶಾಲೆಯಲ್ಲಿ ಸುರಕ್ಷತಾ ಲೋಪದ ಆರೋಪದ ಮೇರೆಗೆ ಬಂಧನ ಭೀತಿಯಲ್ಲಿರುವ ಶಾಲೆ ಮಾಲೀಕ ಹಾಗೂ ಸಿಇಒ ರ‍್ಯಾನ್ ಪಿಂಟೋ ನಿರೀಕ್ಷಣಾ ಜಾಮೀನು ಕೋರಿ ಬಾಂಬೇ ಹೈಕೋರ್ಟ್ ಮೊರೆ ಹೋಗಿದ್ದಾರೆ. ಏತನ್ಮಧ್ಯೆ ಹರ್ಯಾಣ-ಪಂಜಾಬ್ ಪೊಲೀಸ್ ಇಲಾಖೆಯ ಒಂದು ತಂಡ ಮುಂಬೈಗೆ ಆಗಮಿಸಿದ್ದು, ಮುಂಬೈನಲ್ಲಿರುವ ರ‍್ಯಾನ್ ಇಂಟರ್ ನ್ಯಾಷನಲ್ ಶಾಲೆಯ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದಾರೆ. ಇಲ್ಲಿ ಶಾಲೆ ಮಾಲೀಕ ರ‍್ಯಾನ್  ಪಿಂಟೋ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.