ದೇಶ

ನಿತೀಶ್ ಕುಮಾರ್ ಶಾಸಕತ್ವ ರದ್ದತಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿಧಾನಸಭಾ ಸದಸ್ಯತ್ವ ರದ್ದತಿಗೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್....

ನಿತೀಶ್ ಕುಮಾರ್ ಶಾಸಕತ್ವ ರದ್ದತಿ ಕುರಿತು ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್
ನಿತೀಶ್ ಕುಮಾರ್
Published On :
ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿಧಾನಸಭಾ ಸದಸ್ಯತ್ವ ರದ್ದತಿಗೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.
ನಿತೀಶ್ ಕುಮಾರ್ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ತಪ್ಪು ಮಾಡಿದ್ದು, ಅವರ ಸದಸ್ಯತ್ವವನ್ನು ಅನರ್ಹಗೊಳಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಪೀಠ, ಈ ಕುರಿತು ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ.
ದೆಹಲಿ ಮೂಲಕ ವಕೀಲ ಎಂಎಲ್ ಶರ್ಮಾ ಅವರು ನಿತೀಶ್ ಕುಮಾರ್ ಅವರ ವಿರುದ್ಧ ಪಿಐಎಲ್ ಸಲ್ಲಿಸಿದ್ದು, ಬಿಹಾರ ಸಿಎಂ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ ನಲ್ಲಿ ತಮ್ಮ ವಿರುದ್ಧದ ಕೊಲೆ ಪ್ರಕರಣವನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿದ್ದಾರೆ.
ನಿತೀಶ್ ಕುಮಾರ್ ಅವರು ಸಂವಿಧಾನಾತ್ಮಕ ಹುದ್ದೆಯಲ್ಲಿರುವುದರಿಂದ 1991ರಿಂದ ಜಾಮೀನು ರಹಿತ ಬಂಧನ ಪ್ರಕರಣಗಳಲ್ಲೂ ಅವರು ಜಾಮೀನು ಪಡೆದುಕೊಂಡಿಲ್ಲ. ಈ ಮೂಲಕ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಿಐಎಲ್ ನಲ್ಲಿ ದೂರಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.