ರೊಹಿಂಗ್ಯರಿಗಿಲ್ಲದ ಪೌರತ್ವ, ಚಕ್ಮಾ ಸಮುದಾಯಕ್ಕೆ ನೀಡಲು ಕೇಂದ್ರ ಸರ್ಕಾರ ಮುಂದು!
ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದೆ ರೊಹಿಂಗ್ಯಾ ಮುಸ್ಲಿಮರಿಗೆ ಪೌರತ್ವ ನಿರಾಕರಿಸಿದ್ದ ಕೇಂದ್ರ ಸರ್ಕಾರ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರಿಗೆ ನೀಡಲು ಮುಂದಾಗಿದೆ.

Published On :
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದೆ ರೊಹಿಂಗ್ಯಾ ಮುಸ್ಲಿಮರಿಗೆ ಪೌರತ್ವ ನಿರಾಕರಿಸಿದ್ದ ಕೇಂದ್ರ ಸರ್ಕಾರ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರಿಗೆ ನೀಡಲು ಮುಂದಾಗಿದೆ.
ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ ಅರುಣಾಚಲ ಪ್ರದೇಶದ ನಿರಾಶ್ರಿತ ಶಿಬಿರಗಳಲ್ಲಿ ವಾಸಿಸುತ್ತಿರುವ ಸುಮಾರು 1 ಲಕ್ಷಕ್ಕೂ ಅಧಿಕ ಚಕ್ಮಾ ಹಾಗೂ ಹಜಾಂಗ್ ಸಮುದಾಯದವರಿಗೆ ಭಾರತೀಯ ಪೌರತ್ವ ನೀಡಲು ನೀರ್ಧರಿಸಿದೆ. ಸುಮಾರು 50 ವರ್ಷಗಳ ಹಿಂದೆಯೇ ಹಿಂದಿನ ಪೂರ್ವ ಪಾಕಿಸ್ತಾನದಿಂದ ಭಾರತಕ್ಕೆ ಆಶ್ರಯವನ್ನರಸಿ ಬಂದಿದ್ದ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರಿಗೆ ಪೌರತ್ವ ನೀಡುವಂತೆ 2015ರಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಈ ಹಿನ್ನಸೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲ್ಲಿದ್ದು, ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
ಇನ್ನು ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಲಹೆಗಾರ ಅಜಿತ್ ಧೋವಲ್, ಅರುಣಾಚಲ ಪ್ರದೇಶ ಸಿಎಂ ಪೇಮಾ ಖಂಡು, ಗೃಹಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಬಹುತೇಕ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರು ಕಳೆದ 5 ದಶಕಗಳಿಂದ ಅರುಣಾಚಲ ಪ್ರದೇಶದಲ್ಲಿ ವಾಸಿಸುತ್ತಿದ್ದು, ಸರ್ಕಾರದ ಯೋಜನೆಗಳನ್ನು ಅನುಭವಿಸುವಲ್ಲಿ ವಿಫಲರಾಗಿದ್ದಾರೆ. ಇದೇ ಕಾರಣಕ್ಕೆ ಈ ಹಿಂದೆ ಸುಪ್ರೀಂ ಕೋರ್ಟ್ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರಿಗೆ ಪೌರತ್ವ ನೀಡುವಂತೆ ಆದೇಶ ನೀಡಿತ್ತು.
ಸುಪ್ರೀಂ ಆದೇಶದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಆದಷ್ಟು ಬೇಗ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರಿಗೆ ಪೌರತ್ವ ನೀಡುವ ಸಾಧ್ಯತೆ ಇದೆ.
ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರಿಗೆ ಮೋದಿ ಬರ್ತ್ ಡೇ ಗಿಫ್ಟ್
ಇನ್ನು ಇದೇ ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಿದ್ದು, ಅಂದು ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಅಂದೇ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರಿಗೂ ಪ್ರಧಾನಿ ಮೋದಿ ಬರ್ತ್ ಡೇ ಗಿಫ್ಟ್ ಆಗಿ ಪೌರತ್ವ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರಿಗೆ ಮೋದಿ ಬರ್ತ್ ಡೇ ಗಿಫ್ಟ್
ಇನ್ನು ಇದೇ ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಿದ್ದು, ಅಂದು ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಅಂದೇ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರಿಗೂ ಪ್ರಧಾನಿ ಮೋದಿ ಬರ್ತ್ ಡೇ ಗಿಫ್ಟ್ ಆಗಿ ಪೌರತ್ವ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
1960ರ ವರೆಗೂ ಚಿತ್ತಗಾಂಗ್ ನ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುತ್ತಿದ್ದ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರು, 1960ರಲ್ಲಿ ಕಪ್ಟಾಯ್ ಅಣೆಕಟ್ಟು ನಿರ್ಮಿಸುವ ಸಲುವಾಗಿ ಅವರ ಭೂಮಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಚಕ್ಮಾ ಮತ್ತು ಹಜಾಂಗ್ ನಿರಾಶ್ರಿತರು ಅರುಣಾಚಲ ಪ್ರದೇಶಕ್ಕೆ ವಲಸೆ ಬಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


