ಕುಲ್'ಭೂಷಣ್ ಜಾಧವ್ ಮುಂದಿಟ್ಟುಕೊಂಡು ಸಿಪಿಇಸಿ ತಡೆಯಲು ಭಾರತ ಯತ್ನ- ಪಾಕಿಸ್ತಾನ
ಕುಲ್'ಭೂಷಣ್ ಜಾಧವ್ ನನ್ನು ಮುಂದಿಟ್ಟುಕೊಂಡು ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ತಡೆಯಲು ಯತ್ನಿಸುತ್ತಿದೆ ಎಂದು ಪಾಕಿಸ್ತಾನ ಮಂಗಳವಾರ ಆರೋಪಿಸಿದೆ...

Published On :
ನವದೆಹಲಿ: ಕುಲ್'ಭೂಷಣ್ ಜಾಧವ್ ನನ್ನು ಮುಂದಿಟ್ಟುಕೊಂಡು ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ ತಡೆಯಲು ಯತ್ನಿಸುತ್ತಿದೆ ಎಂದು ಪಾಕಿಸ್ತಾನ ಮಂಗಳವಾರ ಆರೋಪಿಸಿದೆ.
ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲ್'ಭೂಷಣ್ ಜಾಧವ್ ಪ್ರಕರಣ ಕುರಿತಂತೆ ಇಂದು ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ಆಂತರಿಕ ಸಚಿವ ಅಹ್ಸಾನ್ ಇಕ್ಬಾಲ್ ಅವರು, ಭಯೋತ್ಪಾದನೆ ಮೂಲಕ ಭಾರತ ಸಿಪಿಇಸಿಯನ್ನು ನಾಶ ಮಾಡುತ್ತಿದೆ ಎಂಬುದಕ್ಕೆ ಕುಲ್ ಭೂಷಣ್ ಜಾಧವ್ ಪ್ರಕರವೊಂದು ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಜಾಧವ್ ಪ್ರಕರಣವನ್ನು ಪಾಕಿಸ್ತಾನ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸುತ್ತೇವೆ. ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಈ ಯತ್ನದಲ್ಲಿ ಪಾಕಿಸ್ತಾನ ಯಶಸ್ಸು ಕಾಣಲಿದೆ. ಚೀನಾ ಮತ್ತು ಪಾಕಿಸ್ತಾನ ರಾಷ್ಟ್ರಗಳ ನಡುವಿನ ಅಭೂತಪೂರ್ವ ಸ್ನೇಹದ ಫಲವಾಗಿ ಸಿಪಿಇಸಿ ರೂಪುಗೊಂಡಿದೆ ಎಂದು ತಿಳಿಸಿದ್ದಾರೆ.
ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಕುಲ್'ಭೂಷಣ್ ಜಾಧವ್'ಗೆ ಪಾಕಿಸ್ತಾನ ಸೇನಾ ನ್ಯಾಯಾಲಯ ಕಳೆದ ಏಪ್ರಿಲ್ ತಿಂಗಳಿನಲ್ಲಿ ಮರಣ ದಂಡನೆ ವಿಧಿಸಿತ್ತು. ಅವರ ವಿರುದ್ಧದ ಬೇಹುಗಾರಿಕೆ ಮತ್ತು ಭಯೋತ್ಪಾದನೆ ಆರೋಪಗಳು ನ್ಯಾಯಾಲಯದ ರಹಸ್ಯ ವಿಚಾರಣೆಯಲ್ಲಿ ಸಾಬೀತಾಗಿದೆ ಎಂದು ಪಾಕಿಸ್ತಾನ ಹೇಳಿಕೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನKulbhushan JadhavChina-Pakistan Economic Corridorಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ಕುಲ್\'ಭೂಷಣ್ ಜಾಧವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


