ಸ್ವಚ್ಛತಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ: ಸಚಿವರಿಗೆ ಪ್ರಧಾನಿ ಮೋದಿ
ಕೇಂದ್ರ ಸರ್ಕಾರ ಮಹತ್ವದ ಆಂದೋಲನಾ ಸ್ವಚ್ಛತಾ ಅಭಿಯಾನದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪುಟ ಸಚಿವರಿಗೆ ಮಂಗಳವಾರ...

Published On :
ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ ಆಂದೋಲನಾ ಸ್ವಚ್ಛತಾ ಅಭಿಯಾನದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪುಟ ಸಚಿವರಿಗೆ ಮಂಗಳವಾರ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಸಂಪುಟ ಸಭೆ ಕರೆದಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಮುಖ ವಿಚಾರಗಳ ಬಗ್ಗೆ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಅಕ್ಟೋಬರ್ 2 ರಿಂದ ಸೆಪ್ಟೆಂಬರ್ 5 ವರೆಗೆ ನಡೆಯಲಿರುವ ಸ್ವಚ್ಛಾತಾ ಅಭಿಯಾನದಲ್ಲಿ ಸಕ್ರಿಯರಾಗಿ ಪಾಲ್ಗೊಳ್ಳುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಇದಲ್ಲದೆ, ಸಾಕ್ಷ್ಯ ಚಿತ್ರವನ್ನೂ ಕೂಡ ಸಚಿವರಿಗೆ ಪ್ರದರ್ಶಿಸಿದ್ದು, ದೇಶದಾದ್ಯಂತ ಸ್ವಚ್ಛತಾ ಅಭಿಯಾನವನ್ನು ಆಯೋಜಿಸುವಂತೆ ಸಚಿವರಿಗೆ ಸೂಚನೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


