ಪಕ್ಷದ ರಕ್ಷಣೆಗಾಗಿ ಯಾವುದೇ ಹಂತಕ್ಕೂ ಹೋಗಲು ಸಿದ್ಧ: ಟಿಟಿವಿ ದಿನಕರನ್
ಎಐಎಡಿಎಂಕೆ ಪಕ್ಷದ ರಕ್ಷಣೆಗೆ ತಾವು ಯಾವುದೇ ಹಂತಕ್ಕೂ ಹೋಗಲು ಸಿದ್ಧ ಎಂದು ಉಚ್ಠಾಟಿತ ಮುಖಂಡ ಟಿಟಿವಿ ದಿನಕರನ್ ಹೇಳಿದ್ದಾರೆ.

Published On :
ಚೆನ್ನೈ: ಎಐಎಡಿಎಂಕೆ ಪಕ್ಷದ ರಕ್ಷಣೆಗೆ ತಾವು ಯಾವುದೇ ಹಂತಕ್ಕೂ ಹೋಗಲು ಸಿದ್ಧ ಎಂದು ಉಚ್ಠಾಟಿತ ಮುಖಂಡ ಟಿಟಿವಿ ದಿನಕರನ್ ಹೇಳಿದ್ದಾರೆ.
ಬುಧವಾರ ಚೆನ್ನೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟಿಟಿವಿ ದಿನಕರನ್ ಅವರು, ನಾವು ಯಾವುದೇ ಕಾರಣಕ್ಕೂ ಡಿಎಂಕೆ ಪಕ್ಷದೊಂದಿಗೆ ಸೇರುವುದಿಲ್ಲ. ಡಿಎಂಕೆ ಪಕ್ಷ ನಮ್ಮ ರಾಜಕೀಯ ಶತ್ರುಗಳಾಗಿದ್ದು, ಅವರೊಂದಿಗೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ. ಆದರೆ ನಾವು ನಮ್ಮ ಪಕ್ಷದ ರಕ್ಷಣೆಗೆ ಯಾವುದೇ ಹಂತಕ್ಕೂ ಹೋಗಲು ಸಿದ್ಧ. ನಮ್ಮ ಬಳಿ 21 ಶಾಸಕರ ಬೆಂಬಲವಿದ್ದು, ಪಳನಿ ಸ್ವಾಮಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಹೀಗಾಗಿ ಕೂಡಲೇ ರಾಜ್ಯಪಾಲ ವಿದ್ಯಾಸಾಗರ ರಾವ್ ಅವರು ಪಳನಿಸ್ವಾಮಿ ಅವರಿಗೆ ಬಹುಮತ ಸಾಬೀತಿಗೆ ಸೂಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು ನಿನ್ನೆ ನಡೆದ ಎಐಎಡಿಎಂಕೆ ಕೌನ್ಸಿಲ್ ಸಭೆ ಕುರಿತಂತೆ ಮಾತನಾಡಿದ ದಿನಕರನ್. ನಿನ್ನೆ ನಡೆದ ಕೌನ್ಸಿಲ್ ಸಭೆಯಲ್ಲಿ ಪಾಲ್ಗೊಂಡ ಮುಖಂಡರು ಕೌನ್ಸಿಲ್ ಸದಸ್ಯರೇ ಅಲ್ಲ. ಹೀಗಿರುವಾಗ ಆ ಸಭೆಗೆ ಯಾವುದೇ ರೀತಿಯ ಕಾನೂನು ಮಾನ್ಯತೆ ಇಲ್ಲ ಎಂದು ದಿನಕರನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


