ದೆಹಲಿಯಲ್ಲಿ 10 ವರ್ಷ ಹಳೆಯ ಡೀಸೆಲ್ ವಾಹನಗಳ ನಿಷೇಧ ತೆರವಿಗೆ ಎನ್ ಜಿಟಿ ನಕಾರ
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಣಕ್ಕೆ ತರುವುದಕ್ಕಾಗಿ 10 ವರ್ಷ ಹಳೆಯದಾದ ಎಲ್ಲಾ ಡೀಸೆಲ್ ವಾಹನಗಳಿಗೆ ಹೇರಿದ್ದ...

Published On :
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಣಕ್ಕೆ ತರುವುದಕ್ಕಾಗಿ 10 ವರ್ಷ ಹಳೆಯದಾದ ಎಲ್ಲಾ ಡೀಸೆಲ್ ವಾಹನಗಳಿಗೆ ಹೇರಿದ್ದ ನಿಷೇಧವನ್ನು ತೆರವುಗೊಳಿಸಲು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‌ಜಿಟಿ) ಗುರುವಾರ ನಿರಾಕರಿಸಿದೆ.
10 ವರ್ಷ ಹಳೆಯದಾದ ಡೀಸೆಲ್ ವಾಹನ ಬಳಸುವುದರಿಂದ ಜನರ ಆರೋಗ್ಯಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂಬುದನ್ನು ಸಾಬೀತಪಡಿಸುವಲ್ಲಿ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವಾಲಯ ವಿಫಲವಾಗಿದೆ ಎಂದು ಹಸಿರು ಪೀಠ ತಿಳಿಸಿದೆ.
ಒಂದು ಹೊಸ ಡೀಸೆಲ್ ಕಾರು 24 ಪೆಟ್ರೋಲ್ ಕಾರುಗಳಿಗೆ ಹಾಗೂ 84 ಸಿಎನ್ ಜಿ ಕಾರುಗಳಿಗೆ ಸಮ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿ. ಹೀಗಾಗಿ ಡೀಸೆಲ್ ವಾಹನಗಳ ಮೇಲಿನ ನಿಷೇಧ ಹಿಂಪಡೆಯುವುದಿಲ್ಲ ಎಂದು ಎನ್‌ಜಿಟಿ ಮುಖ್ಯಸ್ಥ ನ್ಯಾಯಮೂರ್ತಿ ಸ್ವತಂತ್ರ ಕುಮಾರ್ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.
ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶ(ಎನ್ ಸಿಆರ್)ದಲ್ಲಿ ಯಾವುದೇ ರೀತಿಯ ಭಾರಿ ಹಾಗೂ ಲಘು ಡೀಸೆಲ್ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸುವಂತೆ ಎನ್ ಜಿಟಿ ಏಪ್ರಿಲ್ 2015ರಲ್ಲಿ ಮಹತ್ವದ ಆದೇಶ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


