ಅಯೋಧ್ಯೆ: ನಿರ್ಮೋಹಿ ಅಖಾಡಾದ ಮುಖ್ಯಸ್ಥ ಮಹಾಂತ್ ಭಾಸ್ಕರ್ ದಾಸ್ ನಿಧನ
ಅಯೋಧ್ಯೆ ರಾಮ ಜನ್ಮಭೂಮಿಯ ಹಕ್ಕುದಾರ ಸಂಘಟನೆಗಳಲ್ಲಿ ಒಂದಾಗಿರುವ ನಿರ್ಮೋಹಿ ಅಖಾಡಾದ ಮುಖ್ಯಸ್ಥ ಭಾಸ್ಕರ್ ದಾಸ್(88) ನಿಧನರಾಗಿದ್ದಾರೆ.

Published On :
ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿಯ ಹಕ್ಕುದಾರ ಸಂಘಟನೆಗಳಲ್ಲಿ ಒಂದಾಗಿರುವ ನಿರ್ಮೋಹಿ ಅಖಾಡಾದ ಮುಖ್ಯಸ್ಥ ಭಾಸ್ಕರ್ ದಾಸ್(88) ನಿಧನರಾಗಿದ್ದಾರೆ.
ಭಾಸ್ಕರ್ ದಾಸ್ ಅವರಿಗೆ ಮೂರನೇ ಬಾರಿಗೆ ಹೃದಯಾಘಾತ ಸಂಭವಿಸಿದ್ದು, ಈ ಹಿಂದೆ 2003 ಹಾಗೂ 2007 ರಲ್ಲಿ ಹೃದಯಾಘಾತಕ್ಕೊಳಗಾಗಿದ್ದರು. ಹರ್ಷನ್ ಹೃದಯ ಸಂಸ್ಥಾನ್ ಆಸ್ಪತ್ರೆಯ ಐಸಿಯುನಲ್ಲಿ ಭಾಸ್ಕರ್ ದಾಸ್ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಗೋರಖ್ ಪುರದ ರಾಣಿದೀಹ್ ಪ್ರದೇಶದಲ್ಲಿ 1929 ರಲ್ಲಿ ಮಹಾಂತ್ ಭಾಸ್ಕರ್ ದಾಸ್ ಜನ್ಮಿಸಿದ್ದರು. 1946 ರಲ್ಲಿ ಅಯೋಧ್ಯೆಗೆ ಆಗಮಿಸಿದ್ದ ಅವರು 1949 ರಲ್ಲಿ ರಾಮಜನ್ಮಭೂಮಿ ಪ್ರಕರಣದಲ್ಲಿ ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


