ಬಾಲಕನ ಹತ್ಯೆ ತಡೆಯಬಹುದಿತ್ತು; ರಯಾನ್ ಶಾಲೆಗೆ ಸಿಬಿಎಸ್ ಇ ಶೋಕಾಸ್ ನೋಟಿಸ್
ಗುರುಗ್ರಾಮದ ರಯಾನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪ್ರಧುಮಾನ್ ಥಾಕೂರ್(7) ಬರ್ಬರ ಹತ್ಯೆ ಪ್ರಕರಣಕ್ಕೆ....

Published On :
ನವದೆಹಲಿ: ಗುರುಗ್ರಾಮದ ರಯಾನ್ ಇಂಟರ್ ನ್ಯಾಷನಲ್ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪ್ರಧುಮಾನ್ ಥಾಕೂರ್(7) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ) ಸ್ವಯಂ ಪ್ರೇರಿತವಾಗಿ ರಯಾನ್ ಶಾಲೆಗೆ ಶೋಕಾಸ್ ನೋಟಿಸ್ ನೀಡಿದೆ.
ವಿದ್ಯಾರ್ಥಿಯ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಬಿಎಸ್ ಇ, ನಿಮ್ಮ ಶಾಲೆಯ ಮಾನ್ಯತೆಯನ್ನು ಏಕೆ ಹಿಂಪಡೆಯಬಾರದು? ಎಂದು ಶೋಕಾಸ್ ನೋಟಿಸ್ ಮೂಲಕ ಪ್ರಶ್ನಿಸಿದೆ.
ಶಾಲೆಯ ಅಧಿಕಾರಿಗಳು ತಮ್ಮ ತಮ್ಮ ಕರ್ತವ್ಯವನ್ನು ಜವಾಬ್ದಾರಿಯುತವಾಗಿ ನಿಭಾಯಿಸಿದ್ದರೆ ಈ ದುರಂತವನ್ನು ತಡೆಯಬಹುದಿತ್ತು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಅಭಿಪ್ರಾಯುಪಟ್ಟಿದೆ.
ಇಂದು ಬೆಳಗ್ಗೆಯಷ್ಟೇ ಆಘಾತ ಹಾಗೂ ಅತೀವ ರಕ್ತಸ್ರಾವವೇ ಪ್ರಧ್ಯುಮನ್ ಥಾಕೂರ್ ಸಾವಿಗೆ ಕಾರಣ ಎಂದು ಮರಣೋತ್ತರ ಪರೀಕ್ಷಾ ವರದಿ ತಿಳಿಸಿತ್ತು.
ಸೆ.8 ರಂದು ರಿಯಾನ್ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪ್ರಧ್ಯುಮ್ ಥಾಕೂರ್ ಎಂಬ ಬಾಲಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರದ್ಯುಮನ್ ಕತ್ತು ಸೀಳಿದ್ದ ದುಷ್ಕರ್ಮಿಗಳು ಶಾಲೆಯ ಶೌಚಾಲಯದಲ್ಲಿ ದೇಹವನ್ನು ಬಿಸಾಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕನನ್ನು ನೋಡಿದ್ದ ವಿದ್ಯಾರ್ಥಿಗಳು ಶಿಕ್ಷಕರಿಗೆ ಮಾಹಿತಿ ನೀಡಿದ್ದರು. ಬಳಿಕ ಶಾಲಾ ಆಡಳಿತ ಮಂಡಳಿ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ, ವೈದ್ಯರು ಬಾಲಕ ಸಾವನ್ನಪ್ಪಿರುವುದಾಗಿ ಘೋಷಿಸಿದ್ದರು. ಪ್ರಕರಣಕ್ಕೆ ಬಾಲಕನ ಪೋಷಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಶಾಲಾ ಆಡಳಿತ ಮಂಡಳಿಯ ವಿರುದ್ಧ ತೀವ್ರವಾಗಿ ಪ್ರತಿಭಟಿಸಿದ್ದರು. ನಿನ್ನೆಯಷ್ಟೇ ಪ್ರಕರಣವನ್ನು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


